ರಾಜ್ಯದ ವಿವಿಧಡೆ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24 ರಿಂದ ಭಾರಿ ಪ್ರಮಾಣದ ಮಳೆ ನಿರೀಕ್ಷೆ ಮಾಡಲಾಗಿದ್ದು. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ 113 mm ನಷ್ಟು ಮಳೆಯಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 70 mm ನಷ್ಟು ಮಳೆಯಾಗಿತ್ತು. ಕಳೆದ ಬಾರಿಗಿಂತ 62% ನಷ್ಟು ಮುಂಗಾರು ಮಳೆ ಏರಿಕೆ ಕಂಡಿದೆ. ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಭಾರೀ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಜಲಮೂಗಳಿಗೆ ಜೀವ ಬಂದಂತಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಾಹಸ ಹೆಚ್ಚಾದಂತಾಗಿದೆ.
ದಾವಣಗೆರೆ, ಪರಶುರಾಂಪುರ, ಹೊನ್ನಾವರ, ಲೋಂಡಾ, ಕೂಡಲಸಂಗಮ, ಚಿಕ್ಕಬಳ್ಳಾಪುರ, ಕುಂದಾಪುರ, ಬೆಳ್ತಂಗಡಿ, ಅಂಕೋಲಾ, ಕೋಟ, ಶಿರಾಲಿ, ಮೂರ್ನಾಡು, ಸಿದ್ದಾಪುರ, ಕಾರ್ಕಳ, ಧರ್ಮಸ್ಥಳ, ಮಾಣಿ, ಮಂಕಿ, ಗೇರುಸೊಪ್ಪ, ಮಹಾಲಿಂಗಪುರ, ಕಮ್ಮರಡಿ, ಗುಬ್ಬಿ, ಗೌರಿಬಿದನೂರು, ಭಾಗಮಂಡಲ, ಆಗುಂಬೆಯಲ್ಲಿ ಮಳೆಯಾಗಿದೆ.
ಮುಂದಿನ ಮೂರು ದಿನಗಳ ಕಾಲ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡಗಳಿಗೆ ಹವಾಮಾನ ಇಲಾಖೆಯ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಜಿಲ್ಲೆಗಳಲ್ಲಿ ಜೂನ್ 21, 22 ಮತ್ತು 23ರಂದು ಭಾರೀ ಮಳೆಯಾಗುವ ಎಲ್ಲ ಲಕ್ಷಣಗಳೂ ಇವೆ ಎಂದು ತಿಳಿಸಿದೆ ಹವಾಮಾನ ಇಲಾಖೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬಹುತೇಕ ಇಡೀ ದಿನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಭಾಗದಲ್ಲಿ ಮಳೆ ಆಗುವ ಖಚಿತತೆ ಇಲ್ಲದಿದ್ದರೂ ಮೋಡ ಕವಿದ ತಂಪಾದ ವಾತಾವರಣ ದಿನವಿಡೀ ಇರಲಿದೆ.
ಅಲ್ಲದೆ, ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.