ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಹಾಗೂ ಕೊಡಗು ಬೆಳಗಾವಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 3 ಮತ್ತು 4 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯುವ ಸಂಭವವಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.