ರಾಜ್ಯದಲ್ಲಿ ಡಿಸೆಂಬರ್ 1ರಿಂದ ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 14 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮತ್ತು ಎರಡು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಕೊಟ್ಟಿದೆ. ಬರುವ ವಾರ ಚಂಡಮಾರುತದ ಪ್ರಭಾವ ರಾಜ್ಯದ ಮೇಲು ಆಗಲಿದ್ದು, ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇದೇ ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವ ರಾಜ್ಯಾದ್ಯಂತ ಬಿರುತ್ತಿದ್ದು ತಮಿಳುನಾಡಿನ ಕರಾವಳಿ ತೀರದ ಚಂಡಮಾರುತದ ಪರಿಣಾಮವಾಗಿ ರಾಜ್ಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿ 14ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಈಗಾಗಲೇ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು. ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದ ಕಾರಣ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಲ್ಲಿ ಒಣಹವೆ ಮುಂದುವರೆಯಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.