ವಾಯುಭಾರ ಕುಸಿತ: ಮುಂದಿನ 5 ದಿನ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ.
ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ(Heavy rainfall) ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಅರೆಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿರುವ ಪ್ರಕಾರ ಮುಂದಿನ 5 ದಿನಗಳು ಹೆಚ್ಚಿನ ಮಳೆಯಾಗುತ್ತದೆ ಎಂದು ತಿಳಿಸಿದೆ. ಇನ್ನು ಕೆಲವು ಕಡೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ? ಯಾಕೆ ಅತಿ ಹೆಚ್ಚು ಮಳೆ ಸುರಿಯುತ್ತಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾಕೆ ಅತಿ ಹೆಚ್ಚು ಮಳೆ ಸುರಿಯುತ್ತಿದೆ?:
ಅರಬ್ಬೀ ಸಮುದ್ರದ ಮೇಲೆ ನಿರಂತರವಾಗಿ ವಾಯುಭಾರ ಕುಸಿತ ಉಂಟಾಗುತ್ತಿರುವುದು ಹವಾಮಾನದಲ್ಲಿ ಶೀತಲ ತೀವ್ರತೆಯನ್ನು ಹೆಚ್ಚಿಸಿದೆ. ಇದು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ರೂಪದಲ್ಲಿ ತನ್ನ ಪ್ರಭಾವವನ್ನು ಬೀರಲಿದೆ. ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಇನ್ನೂ ಪ್ರಬಲಗೊಳ್ಳಲಿದೆ. ಮಲೆನಾಡು, ಕರಾವಳಿ, ಹಾಗೂ ದಕ್ಷಿಣ ಕರ್ನಾಟಕದ ಕೆಲವೆಡೆ ಈ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇರುವುದರಿಂದ ನದಿಗಳ ನೀರಿನ ಮಟ್ಟವು ತೀವ್ರಗೊಳ್ಳುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ :
ಹವಾಮಾನ ಇಲಾಖೆ, IMD (India Meteorological Department), ರಾಜ್ಯದ ಜನತೆಗೆ ಮುನ್ನೆಚ್ಚರಿಕೆಯ ಸೂಚನೆ ನೀಡಿದೆ. ಜನರು ತುರ್ತು ಅಗತ್ಯವಿಲ್ಲದೆ ಮನೆಯ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು. ಪ್ರವಾಸೋದ್ಯಮದ ಹಾಟ್‌ಸ್ಪಾಟ್‌ಗಳಾದ ಕೊಡಗು, ಚಿಕ್ಕಮಗಳೂರು, ಮತ್ತು ಕರಾವಳಿ ಪ್ರದೇಶಗಳಿಗೆ ಹೋಗುವುದು ವಿಪರೀತ ಅಪಾಯಕಾರಿಯಾಗಬಹುದು. ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಕಂಡುಬರುವ ಸಂಭವವಿದೆ. ಅಲ್ಲದೆ, ಹವಾಮಾನ ವೈಪರೀತ್ಯದಿಂದಾಗಿ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ :
ಕರ್ನಾಟಕದಲ್ಲಿ ಭಾರಿ ಮಳೆ ಆಗುತ್ತಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೆಂಗಳೂರು ನಗರ,ಮೈಸೂರು, ಕೋಲಾರ, ಕೊಡಗು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದಾಗಿ ಕೃಷಿ ಕ್ಷೇತ್ರದ(agricultural sector) ಮೇಲೆ ಹೆಚ್ಚು ಪರಿಣಾಮ ಬೀರಲಿದೆ :
ಕರ್ನಾಟಕದ ಬೆಳೆ ಬೆಳೆಯುವ ಪ್ರದೇಶಗಳಿಗೆ ಈ ಮಳೆಯಿಂದ ತೊಂದರೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಈ ಸಮಯದಲ್ಲಿ ಬೆಳೆ ನಾಶಗೊಳ್ಳುವ ಅಪಾಯವಿದೆ. ಖಾರೀಫ್ ಹಂಗಾಮಿನಲ್ಲಿ ಬೆಳೆದಿರುವ ತೊಗರಿ, ಜೋಳ, ಮತ್ತು ಇತರ ಬೆಳೆಗಳಿಗೆ ಈ ಮಳೆ ಬಹಳಷ್ಟು ನಷ್ಟ ಉಂಟುಮಾಡಬಹುದು. ಜಮೀನುಗಳಲ್ಲಿ ನೀರು ನಿಲ್ಲುವ ಸ್ಥಿತಿಯಿಂದಾಗಿ ಬೆಳೆ ಕುಸಿಯುವ ಸಮಸ್ಯೆ ಎದುರಾಗಬಹುದು.
ಬೆಂಗಳೂರಿನಲ್ಲಿ(Bangalore) ಭಾರಿ ಮಳೆಯಾಗುವ ಸಾಧ್ಯತೆ :
Rain in Bangalore : ಬೆಂಗಳೂರು ನಗರ ಸೇರಿದಂತೆ ಪ್ರಮುಖ ನಗರ ಪ್ರದೇಶಗಳಲ್ಲಿ ಮಳೆಯ ಅಬ್ಬರದಿಂದಾಗಿ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ನಿನ್ನ ಬೆಳ್ಳಗೆಯಿಂದಲೇ ತುಂತುರು ಮಳೆಯಾಗುತ್ತಿದ್ದು, ಮುಂದಿನ 5 ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಮಸ್ಯೆ ತೀವ್ರವಾಗಿ ಎದುರಾಗಬಹುದು. ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಗೆ ಹಾನಿ ಉಂಟಾಗುವ ಸಾಧ್ಯತೆ ಇರುವುದರಿಂದ ಪಾಲಿಕೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಇನ್ನು, ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು. ರಾಮನಗರ. ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸುತ್ತಾ ಮುತ್ತಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆ ಹಾಸನ, ಮಂಡ್ಯ, ರಾಮನಗರ, ಮತ್ತು ಮೈಸೂರು ಭಾಗದಲ್ಲಿ ರಸ್ತೆಗಳ ಮೇಲೆ ನೀರು ಹರಿದುಹೋಗುವ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ವಾಹನ ಸವಾರರು ತಮ್ಮ ಯಾತ್ರೆಗಳನ್ನು ಸುರಕ್ಷಿತವಾಗಿ ಯೋಜಿಸಲು ಮನವಿ ಮಾಡಲಾಗಿದೆ.
ಹವಾಮಾನ ವಿಭಾಗವು ಮುಂದಿನ 5 ದಿನಗಳು ರಾಜ್ಯಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆಗಳ ನಿರೀಕ್ಷೆ ವ್ಯಕ್ತಪಡಿಸಿದೆ. ಕಡಲತೀರದ ಹಳ್ಳಿಗಳು ಮತ್ತು ಮೀನುಗಾರರು ಇನ್ನಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.