ರಾಜ್ಯದಲ್ಲಿ ಫೆಂಗಲ್ ಚೆಂಡ ಮಾರುತ ಭಾರಿ ಸದ್ದು ಮಾಡುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬೆನ್ನಲ್ಲಿ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಜಧಾನಿ ಬೆಂಗಳೂರಲ್ಲೂ ಭಾನುವಾರದಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.
ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳ ಮೇಲೆ ಬೀರಲಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ , ಮಂಡ್ಯ, ತುಮಕೂರು, ಚಿಕ್ಕಮಗಳೂರು, ಹಾಸನದ ಕೆಲವು ಕಡೆ ಮುಂದಿನ 3 ಗಂಟೆಯಲ್ಲಿ ಭಾರೀ ಗುಡುಗು ಮಳೆ ಅಗಲಿದೆ ಎಂದು ಹವಾಮಾನ ಇಲಾಖೆ ನೌಕಾಸ್ಟ್ ವರದಿ ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊರತುಪಡಿಸಿ ಉಳಿದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ನಾಳೆ ಬೆಳಗ್ಗೆ 8:30ರ ವರೆಗೆ ರೆಡ್ ಅಲರ್ಟ್ ಘೋಷಣೆಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರ ಸಹ ರಜೆ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.