ರಾಜ್ಯದಲ್ಲಿ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಅನೇಕ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಆಗುವ ಸಂಭವವಿದ್ದು, ಅವಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಇಂದು ರಾಜ್ಯಾದ್ಯಂತ ಎಲ್ಲೆಲ್ಲಿ ಮಳೆ ಆಗುತ್ತೆ ಎನ್ನುವುದುದರ ವಿವರ ಕೆಳಗೆ ಕೊಡಲಾಗಿದೆ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಇಂದು ಸೋಮವಾರ (ಮೇ 13) ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೊಅಲರ್ಟ್ ನೀಡಲಾಗಿದೆ. ಮೇ 13ರಿಂದ 15ರವರಗೆ ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ಮೇ 14 ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಮೇ 15 ರಂದು ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಯಾವುದೇ ಎಚ್ಚರಿಕೆಯ ಮುನ್ಸೂಚನೆ ಇರುವುದಿಲ್ಲ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಬಿರುಗಾಳಿ, ಗುಡುಗು ಸಮೇತ ಮಳೆ ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾನುವಾರ ಸುರಿದ ಮಳೆಗೆ 4 ಮಂದಿ ಮೃತಪಟ್ಟಿದ್ದಾರೆ. ಇನ್ನು ಮುಂದಿನ ಮೂರು ದಿನ ಜೋರು ಮಳೆಯಾಗಲಿದೆ.ಬೆಂಗಳೂರು, ಮೈಸೂರು, ಧಾರವಾಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಸಿಡಿಲು ಬಡಿದು ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮರಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.