Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ ಇಲ್ಲಿದೆ

rain alert 2

ರಾಜ್ಯದಲ್ಲಿ ರಣಬಿಸಿಲಿನ ತಾಪಮಾನದ ಕಾವು ಹೆಚ್ಚಿರುವ ಈ ಸಂದರ್ಭದಲ್ಲಿ ಮಳೆರಾಯನ ಆಗಮನ ವಾಗಲಿದೆ, ಈಗಾಗಲೇ ಕೊಡಗಿನಲ್ಲಿ ವರ್ಷದ ಮೊದಲ ಮಳೆಯಾಗಿದ್ದು. ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಇಂದು ಮಾರ್ಚ್ 21 ಗುರುವಾರ, ಕೊಡಗು ಮಂಡ್ಯ ಸೇರಿ ರಾಜ್ಯದ 23 ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ವ್ಯಾಪಕ ಮಳೆ ಆಗಬಹುದಾದ ಸಂಭವವಿದೆ. ಬೆಳಗ್ಗೆ ಮತ್ತು ಸಂಜೆ ವೇಳೆ ಇತ್ತೀಚೆಗೆ ತಂಪು ವಾತಾವರಣದ ರೀತಿ ಭಾಸವಾಗುತ್ತಿದೆ.

ಬೆಂಗಳೂರು ಸುತ್ತಮುತ್ತ ಒಂದೆರಡು ಕಡೆಗಳಲ್ಲಿ ಮಳೆ ಬೀಳಬಹುದಾದರೂ, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಷ್ಣಾಂಶದಲ್ಲಿ 2 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಿಕೆ, ಇಳಿಕೆ ಕಂಡುಬರಬಹುದು, ಅದರಂತೆ, ಮುಂದಿನ 24 ಗಂಟೆ ಅವಧಿಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮೆಳಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ತಾಪಮಾನ ಮುನ್ಸೂಚನೆ ಪ್ರಕಾರ, ಒಳನಾಡಿನ ಒಂದೆರಡು ಕಡೆಗಳಲ್ಲಿ ಅಂದರೆ ಬಾಗಲಕೋಟೆ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಮಾರ್ಚ್ 21ರ ಬಳಿಕ ಒಂದೆರಡು ದಿನ ಬೇಸಿಗೆ ಮಳೆಯ ನಿರೀಕ್ಷೆ ಮಾಡಬಹುದಾಗಿದ್ದು, ಇದರ ತೀವ್ರತೆಯ ಆಧಾರದಲ್ಲಿ ಉಷ್ಣಾಂಶದಲ್ಲಿ ಬದಲಾವಣೆಗಳಾಗಲಿದೆ. 24ರಿಂದ ರಾಜ್ಯದಲ್ಲಿ ಬೇಸಿಗೆ ಮಳೆ ಇಳಿಮುಖವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

tel share transformed

ಎಲ್ಲೆಲ್ಲಿ ಮಳೆ ಬೀಳಲಿದೆ ?

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಮಳೆ ಬೀಳಬಹುದು. ಇದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಗದಗ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರುಗಳಲ್ಲಿ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

whatss

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 


Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!