ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯುತ್ತಿದೆ. ಕೇವಲ ಕರಾವಳಿ ಭಾಗದಲ್ಲಿ ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಕಳೆದ ಮುಂಗಾರಿಗೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ 62% ನಷ್ಟು ವಾಡಿಕೆಯ ಮುಂಗಾರು ಮಳೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬಾರಿ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ವಿವರವಾಗಿ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಸುದ್ದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದೆಲ್ಲಡೆ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಬಗ್ಗೆ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ 113 mm ನಷ್ಟು ಮಳೆಯಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 70 mm ನಷ್ಟು ಮಳೆಯಾಗಿತ್ತು. ಕಳೆದ ಬಾರಿಗಿಂತ 62% ನಷ್ಟು ಮುಂಗಾರು ಮಳೆ ಏರಿಕೆ ಕಂಡಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 17ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಇಂದು ಎಲ್ಲೆಲ್ಲಿ ಮಳೆ
ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು , ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಸೇರಿ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆ ಆಗಲಿದೆ. ವಿಜಯಪುರ & ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ , ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಲಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಕೋಲಾರ, ವಿಜಯಪುರಕ್ಕೂ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಸಂಜೆಯಾಗುತ್ತಿದ್ದರೆ ಮಳೆರಾಯ ತನ್ನ ಆರ್ಭಟವನ್ನು ಮುಂದುವರೆಸುತ್ತಲೇ ಇದ್ದಾನೆ. ಮುಂದಿನ 24 ಗಂಟೆ ಅವಧಿಯಲ್ಲಿ ಮತ್ತಷ್ಟು ಮಳೆ ಬರುವ ಕುರಿತು ಇದೀಗ ಎಚ್ಚರಿಕೆ ಕೊಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.