ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ, ಹೌದು ಮುಂಬರುವ ಇನ್ನೂ ಮೂರು ದಿನಗಳ ಕಾಲ ಚಳಿ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ:
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದ 12 ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (IMD). ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ (Karnataka Weather). ಬೆಂಗಳೂರಿನಲ್ಲಿ ಚಳಿ (Cold Weather) ಹೆಚ್ಚಾಗಲಿದ್ದು ಮೋಡ ಕವಿದ ವಾತಾವರಣ ಇರಲಿದೆ.
ಎಲ್ಲೆಲ್ಲಿ ಮಳೆಯ ಅಬ್ಬರ :
ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಹಾಗೂ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ, ಹಾಸನ, ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಉಡುಪಿ, ಚಾಮರಾಜನಗರ, ಬಾಗಲಕೋಟೆ, ರಾಯಚೂರು, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಳ :
ಸಾಮಾನ್ಯವಾಗಿ ಚಳಿಗಾಲ ಡಿಸೆಂಬರ್ ತಿಂಗಳ ಮೊದಲವಾರದಲ್ಲಿ ಆರಂಭವಾಗಲಿದ್ದು, ಮೊರನೇ ವಾರನೇ ಚಳಿಯು ಪ್ರಮಾಣ ಹೆಚ್ಚಾಗಿರಲಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಕಡಿಮೆ ಚಳಿ ಇರಲಿದ್ದು ಡಿಸೆಂಬರ್ ಅಂತ್ಯ ಮತ್ತು ಜನವರಿಯಲ್ಲಿ ಮಾತ್ರ ಚಳಿ ಹೆಚ್ಚಾಗಿ ಕಂಡುಬರಲಿದೆ ಎಂದು ಹವಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಭಾರಿ ಚಳಿ:
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
#ಕರ್ನಾಟಕ ರಾಜ್ಯ- ಜಿಲ್ಲೆ, ತಾಲೂಕು ಮತ್ತು ಹೋಬಳಿವಾರು ಈಶಾನ್ಯ ಮುಂಗಾರು ಮಳೆಯ ನಕ್ಷೆಗಳು(1ನೇ ಅಕ್ಟೋಬರ್- 16ನೇ ಡಿಸೆಂಬರ್-2023). #KarnatakaState District, Taluk & Hobli wise Northeast Rainfall Maps (1st October to 16th December 2023). pic.twitter.com/uVO4omzU97
— Karnataka State Natural Disaster Monitoring Centre (@KarnatakaSNDMC) December 16, 2023
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.