ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ಭಾರಿ ಆತಂಕ ಎದುರಾಗಿತ್ತು ಈ ಕಾರಣ ರೈತರು ಕೂಡ ಮುಂಗಾರು ಮಳೆ ಪೂರ್ಣ ಕೈಕೊಟ್ಟಿದೆ ಅಂತ ನಿರ್ಧರಿಸಿದ್ರು. ನೋಡ ನೋಡುತ್ತಲೇ ಮುಂಗಾರು ಮಳೆಯ ಸಮಯ ಕೂಡ ಮುಗಿದಿತ್ತು. ಕೊನೆಗೂ ಈಗ ಹಿಂಗಾರು ಮಳೆ ದಕ್ಷಿಣ ಭಾರತದ ರಾಜ್ಯಗಳ ಕೈ ಹಿಡಿಯುತ್ತಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News ) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ಇದ್ದರೆ, ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಇಂದು ಜನವರಿ 9ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸೂಚನೆ ಇಲ್ಲ ಬದಲಿಗೆ ಒಣ ಹವೆಯೇ ಇರಲಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಹ ಹಗುರ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಶಿವಮೊಗ್ಗ, ತುಮಕೂರು, ರಾಮನಗರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.