ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ಹೈರಾಣಾಗಿದ್ದಾರೆ, ನಿನ್ನೆ ಯುಗಾದಿ ಹಬ್ಬದಂದು ರಾಜ್ಯದ ಹಲವು ಕಡೆ ಮಳೆಯಾಗಿದ್ದು , ಜನರಲ್ಲಿ ಹಬ್ಬದ ಜೊತೆ ಮಳೆಯ ಆಗಮನ ಡಬಲ್ ಖುಷಿ ತಂದಿದೆ, ನಿನ್ನೆ ಯುಗಾದಿ ಹಬ್ಬದಂದು ಹಾವೇರಿ ಬೀದರ್ ವಿಜಯಪುರ ಶಿವಮೊಗ್ಗ ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಹಲವು ಜನರು ಎಕ್ಸ್ ನಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನು ಏಪ್ರಿಲ್ 15ರವರೆಗೆ ಈ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 15 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ನಗರದಲ್ಲಿ ಏಪ್ರಿಲ್ 13 ಅಥವಾ 14ನೇ ತಾರೀಕಿನಂದು ಮಳೆಯಾಗುವ ಸಾಧ್ಯತೆ ಇದೇ ಎಂದು ಹೇಳಿದೆ.
ಈಗಾಗಲೇ ರಾಜ್ಯದಲ್ಲಿ ಚಿಕ್ಕಮಗಳೂರು ಮೈಸೂರು ಕೊಡಗು ಸೇರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ನಿನ್ನೆ ಯುಗಾದಿ ಹಬ್ಬದಂದು ಹಾವೇರಿ ಚಿತ್ರದುರ್ಗ ವಿಜಯನಗರ ದಾವಣಗೆರೆ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗಿದೆ.
Good rains over Haveri District 🌧️🌧️ pic.twitter.com/s7I2T5FFrV
— Naveen Reddy (@navin_ankampali) April 9, 2024
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಏಪ್ರಿಲ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!
- ರಾಜ್ಯದ ಈ 14 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ.
- ಹಳೆಯ ವೋಟರ್ ಐಡಿ ಮೊಬೈಲ್ನಲ್ಲೇ ಡೌನ್ಲೋಡ್ ಮಾಡಿ, How to Download Voter ID Online
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- 2024ರ ಹೊಸ ಮತದಾರರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಸೇರ್ಪಡೆಗೆ ಎರಡೇ ದಿನ ಬಾಕಿ.
- BSNL ಗ್ರಾಹಕರಿಗೆ ಗಮನಿಸಿ ಈ ದಾಖಲೆ ತೋರಿಸಿ ಉಚಿತ 4ಜಿ ಸಿಮ್ ಕಾರ್ಡ್ ಪಡೆಯಿರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..