ರಾಜ್ಯದಲ್ಲಿ ಅನೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ವಾತಾವರಣದಲ್ಲಿ ಬದಲಾವಣೆ ಆಗುತ್ತಿದ್ದು, ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಅನೇಕ ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಸದ್ಯ ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಮುಂದಿನ 4 ದಿನಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು, ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಸದ್ಯ ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಮುಂದಿನ 4 ದಿನಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು, ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ
ಈ ಜಿಲ್ಲೆಗಳಿಗೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ
ಮೇ 11: ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು,
ಮೇ 12: ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು.
ಮೇ 13: ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ.
ಮೇ 14: ವಿಜಯಪುರ
ಮೇ 11 &12 ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವೆಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 13ರಿಂದ 15ರವರಗೆ ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶದಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆಲವು ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಸಹ ಉಂಟಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳು ಸೇರಿದಂತೆ ಹಲವು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ” ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.