Heavy Rain alert : ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಹೈ ಅಲರ್ಟ್ ಘೋಷಣೆ

IMG 20241016 WA0008

ಜೋರಾದ ಹಿಂಗಾರು ಮಳೆ ಅಕ್ಟೋಬರ್.19(October) ರವರೆಗೆ ಕರ್ನಾಟಕದ (Karnataka) ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ.

ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ  ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು,ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಮಂಗಳವಾರ ರಾಜಧಾನಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ದಿನಪೂರ್ತಿ ಸುರಿದ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸಿವೆ. ಅದರಲ್ಲೂ ಯಾದಗಿರಿ ಜಿಲ್ಲೆಯಾದ್ಯಂತ (Yadagiri District) ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ರೈತ ದೇವಪ್ಪ (38) ಮೃತಪಟ್ಟಿದ್ದಾರೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೀತಿಯ ಧಾರಾಕಾರ ಮಳೆಯಿಂದಾಗಿ ಜನರು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಹವಮಾನ ಇಲಾಖೆ ಕೆಲವೊಂದಷ್ಟು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಶಿಸಿದೆ. ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ? ಯಾಕೆ ಅತಿ ಹೆಚ್ಚು ಮಳೆ ಸುರಿಯುತ್ತಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾಕೆ ಅತಿ ಹೆಚ್ಚು ಮಳೆ ಸುರಿಯುತ್ತಿದೆ?:

ಕಳೆದ ಒಂದು ವಾರದಿಂದ ಅದರಲ್ಲೂ ಕಳೆದ ಎರಡು ದಿನಗಳು ದಿನಪೂರ್ತಿ ಮಳೆಯಾಗುತ್ತಿರುವ ಕಾರಣ ಬಂಗಾಳ‌ಕೊಲ್ಲಿಯಲ್ಲಿ(Bay of Bengal) ಆದಂತಹ  ವಾಯುಭಾರ ಕುಸಿತ. ಈ ಹಿನ್ನಲೆ ವಾಯುಭಾರ ಕುಸಿತವಾಗುವ ಸ್ಥಳಗಳಲ್ಲಿ  ಗಾಳಿ ಅಪ್ರದಕ್ಷಿಣವಾಗಿ ಚಲಿಸುತ್ತೆ (ಗಡಿಯಾರದ ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದೆ).ಇದರ ಪರಿಣಾಮ ಭೂಮಿಯ ಮೇಲ್ಮೈ ಮೇಲಿನ ಗಾಳಿ ಮೇಲಕ್ಕೆ ಎತ್ತುತ್ತದೆ. ಇದರಿಂದ ಮೇಲಕ್ಕೆ ಗಾಳಿ ಹೋದಂತೆ ಗಾಳಿ ತಂಪಾಗಿ ಮೋಡವಾಗಿ ಪರಿವರ್ತನೆಗೊಳ್ಳುತ್ತದೆ ನಂತರ ಮಳೆ ಆಗುತ್ತದೆ. ಪರಿಣಾಮ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ. ನಿನ್ನೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿತ್ತು, ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯಾದ್ಯಂತ ಅಕ್ಟೋಬರ್.19ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ (Meteorology Department) ತಿಳಿಸಿದೆ.

ಮಂಗಳವಾರ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಿದೆ :

ಮಂಗಳವಾರ (Tuesday) ದಿನವಿಡೀ ಸುರಿದಂತಹ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಳಿಸಿದೆ.. ರಸ್ತೆಗಳೆಲ್ಲ ಸಮುದ್ರದ ರೀತಿ ಕಾಣುತ್ತಿದ್ದು ಜನರು ಓಡಾಡಲು ಬಹಳ ಕಷ್ಟವಾಗುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ (Bangalore) ಸುರಿದ ಮಳೆ ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ. ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಗದಗ, ವಿಜಯಪುರ,ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆ ಮಂಗಳವಾರ ದಿನಪೂರ್ತಿ ಮಳೆಯಾಗಿದೆ.

ಈ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಆರೆಂಜ್ ಅಲರ್ಟ್:

ಭಾರತೀಯ ಹವಾಮಾನ ಇಲಾಖೆ ಜನರಿಗೆ ಮುನ್ನೆಚ್ಚರಿಸುವ ಸಲುವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಜಿಲ್ಲೆಗಳಿಗೆ ಅಕ್ಟೋಬರ್  18ರ ವರೆಗೆ ಆರೆಂಜ್ ಅಲರ್ಟ್ (Orange Alert)ಘೋಷಣೆ ಮಾಡಲಾಗಿದೆ.

ಇನ್ನು 4 ದಿನ ಬೆಂಗಳೂರಿನಲ್ಲಿ ಸುರಿಯಲಿದೆ ಭಾರಿ ಮಳೆ :

ಬೆಂಗಳೂರಿನಲ್ಲಿ (Bangalore)ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಇಂದು ಬೆಂಗಳೂರಿಗೆ ಯಲ್ಲೋ ಅಲರ್ಟ್(Yellow alert) ಘೋಷಿಸಲಾಗಿತ್ತು. ನಾಳೆ ಆರೆಂಜ್ ಅಲರ್ಟ್ (Orange Alert)ಘೋಷಣೆ ಮಾಡಲಾಗಿದ್ದು, ಇನ್ನು ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಗಮನಿಸಿ :

ಅವಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!