ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು, ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಪ್ರತಿನಿತ್ಯ ಕೆಲಸಕ್ಕೆ ಹೋಗಲು ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದಾರೆ. ಮಳೆ ಕಡಿಮೆಯಾಗಿದೆ ಸ್ವಲ್ಪ ಚೇತರಿಸಿಕೊಳ್ಳೋಣ ಎನ್ನುವಷ್ಟರಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಕೇಳಿಬರುತ್ತಿದೆ. ಒಂದನೇ ತಾರೀಕಿನಿಂದ ನಾಲ್ಕನೇ ತಾರೀಕಿನವರೆರಗೆ ಹಲವು ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ (Meteorology Department) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಯಾವ ಯಾವ ದಿನ ಮಳೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಲ್ಲೆಲ್ಲಿ ಆರೆಂಜ್ ಅಲರ್ಟ್ (Alert) ಘೋಸಿಸಲಾಗಿದೆ?
ಅವಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ನವಂಬರ್ 4ರ ವರೆಗೆ ಕೇರಳ, ತಮಿಳುನಾಡಿನ ಪುದುಚೇರಿ, ಕಾರೈಕಲ್‌ಗೆ ಸೇರಿದಂತೆ ಹಲವು ಕಡೆ ಮಳೆಯಾಗುವ ಸಂಭವ ಇರುವುದರಿಂದ ಈ ಮೇಲಿನ ಎಲ್ಲಾ ಪ್ರದೇಶಗಳಿಗೂ ಕೂಡ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ (Yellow Alert) ಘೋಷಣೆ :
ನೆನ್ನೆ ಮತ್ತು ಇಂದು ದಕ್ಷಿಣ ಕನ್ನಡದಲ್ಲಿ ಹೆಚ್ಚು ಮಳೆಯಾಗಿದ್ದು, ನವೆಂಬರ್ 4 ರವರೆಗೆ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಕರ್ನಾಟಕದ ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ರಾಜಧಾನಿ ನವದೆಹಲಿಯಲ್ಲಿ ಇಂದು ಮತ್ತು ನೆನ್ನೆ ಸ್ವಲ್ಪಮಟ್ಟಿನ ಮಳೆಯಾಗಿದ್ದು, ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿಯಲ್ಲಿ ಹೆಚ್ಚು ಮಾಲಿನ್ಯ ದಿಂದ ವಾತಾವರಣ ಕೂಡಿದ್ದು, ಪಟಾಕಿಗಳನ್ನು ನಿಷೇಧಿಸಿದ್ದರು ಕೂಡ ಜನರು ದೀಪಾವಳಿಯ ಪ್ರಯುಕ್ತ ಪಟಾಕಿಗಳನ್ನು ಹೊಡೆದಿದ್ದಾರೆ. ಆದ್ದರಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಜಾಸ್ತಿಯಾಗಿದ್ದು, ಜನರ ಆರೋಗ್ಯದಲ್ಲಿ ಏರುಪೇರಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.