ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಜೋರು ಮಳೆ ಆಗಿದೆ. ಹಲವು ಕಡೆಗಳಲ್ಲಿ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳು ಇವೆ. ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಎರಡು ದಿನ ಮಳೆಯಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಒಳನಾಡು ಜಿಲ್ಲೆಗಳ ಕೆಲವು ಜಿಲ್ಲೆಗಳಲ್ಲಿ ಆಗಾಗ ಮಳೆಯ ದರ್ಶನವಾಗುತ್ತಿದೆ. ಈ ಪೈಕಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ,ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ, ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸಂಭವವಿದೆ.
ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಡಿಸೆಂಬರ್ 2 ವರೆಗೆ ಅಲ್ಲಲ್ಲಿ ತಂಪು ವಾತಾವರಣ ಜೊತೆಗೆ ತುಂತುರು ಮಳೆ ನಿರೀಕ್ಷೆ ಇದೆ. ಇದರ ಹೊರತು ಯಾವುದೇ ಗಂಭೀರ ಸ್ವರೂಪದ ಮಳೆ ಮುನ್ಸೂಚನೆ ಇಲ್ಲ. ಡಿಸೆಂಬರ್ 2 ನಂತರ ವಾತಾವರಣದಲ್ಲಿ ಬಿಸಲಿನ ಪ್ರಯಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ