ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿ ಏರಿಕೆ ಆಗುತ್ತಿದ್ದು. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರವಿದ್ದು ಮುಂದಿನ 2 ದಿನ ಚಳಿಯ ಜೊತೆ ಮಳೆಯು ಬೀಳಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ:
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (IMD). ಕೋಲಾರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆಯದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ದಕ್ಷಿಣ ಭಾಗದ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಲೇ ಇದ್ದು, ಇದರಿಂದ ಈ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ನೆರೆಯ ತಮಿಳುನಾಡು, ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯತ್ತಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಳ :
ಸಾಮಾನ್ಯವಾಗಿ ಚಳಿಗಾಲ ಡಿಸೆಂಬರ್ ತಿಂಗಳ ಮೊದಲವಾರದಲ್ಲಿ ಆರಂಭವಾಗಲಿದ್ದು, ಮೊರನೇ ವಾರನೇ ಚಳಿಯು ಪ್ರಮಾಣ ಹೆಚ್ಚಾಗಿರಲಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಕಡಿಮೆ ಚಳಿ ಇರಲಿದ್ದು ಡಿಸೆಂಬರ್ ಅಂತ್ಯ ಮತ್ತು ಜನವರಿಯಲ್ಲಿ ಮಾತ್ರ ಚಳಿ ಹೆಚ್ಚಾಗಿ ಕಂಡುಬರಲಿದೆ ಎಂದು ಹವಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಭಾರಿ ಚಳಿ:
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
#ಕರ್ನಾಟಕ ರಾಜ್ಯ- ಜಿಲ್ಲೆ, ತಾಲೂಕು ಮತ್ತು ಹೋಬಳಿವಾರು ಈಶಾನ್ಯ ಮುಂಗಾರು ಮಳೆಯ ನಕ್ಷೆಗಳು(1ನೇ ಅಕ್ಟೋಬರ್- 18ನೇ ಡಿಸೆಂಬರ್-2023). #KarnatakaState District, Taluk & Hobli wise Northeast Rainfall Maps (1st October to 18th December 2023). pic.twitter.com/ecA3srZm91
— Karnataka State Natural Disaster Monitoring Centre (@KarnatakaSNDMC) December 18, 2023
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.