ರಾಜ್ಯದಲ್ಲಿ ದಿನದಿಂದ ದಿನಕ್ಕೆ ಶೀತದ ಗಾಳಿ ಹೆಚ್ಚಾಗಿದೆ, ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದೆ. ರಾಜಧಾನಿ ಬೆಂಗಳೂರಿನಲ್ಲಿ ಶೀತ ಗಾಳಿಯದ್ದು ಬೆಳಗ್ಗೆಯಿಂದಲೇ ಮಾಡೋಕೆ ವಾತಾವರಣ ನಿರ್ಮಾಣವಾಗಿದೆ. ಇನ್ನೂ ರಾಜ್ಯದ 22 ಜಿಲ್ಲೆಗಳಲ್ಲಿ ಜನವರಿ 9 ರವರೆಗೆ ಮಳೆಯ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದ್ಲಲಿನ ಹವಾಮಾನ ಬದಲಾವಣೆಯು ಕರ್ನಾಟಕ ಸೇರಿದಂತೆ ತಮಿಳುನಾಡಿನ ಮೇಲೆ ಪ್ರಭಾವ ಭೀರಿದೆ.
Karnataka weather Updates : ಕರ್ನಾಟಕ ಹವಾಮಾನ ವರದಿ
ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ (Rain alert) ಸಾಧ್ಯತೆ ಇದ್ದರೆ, ಉತ್ತರ ಒಳನಾಡಲ್ಲಿ ಹಗುರದಿಂದ ಕೂಡಿದ (Karnataka weather Forecast) ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಶುಕ್ರವಾರ ಜನವರಿ 5ರಂದು ಒಂದು ದಿನ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಸೇರಿ ಆರು ಜಿಲ್ಲೆಗಳಲ್ಲಿ ನಾಳೆ ಅತ್ಯಧಿಕ ಮಳೆ ಆಗಲಿದೆ. ಈ ಸಂಬಂಧ ಈ ಜಿಲ್ಲೆಗಳಿಗೆ ಒಂದು ದಿನ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಂಜು ಮುಸುಕುವ ಸಾಧ್ಯತೆ ಇದೆ. ಸಂಜೆ ಅಥವಾ ರಾತ್ರಿ ಹೊತ್ತು ಮಳೆ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕಕ್ಕೆ ದಿಡೀರ್ ಮಳೆ ಬರುವ ಮುನ್ಸೂಚನೆ ಸಿಕ್ಕಿದೆ, ಹೌದು, ಕರ್ನಾಟಕಕ್ಕೆ ಅರಬ್ಬಿ ಸಮುದ್ರ ಹತ್ತಿರ ಇರುವುದರಿಂದ ಪ್ರಾಥಮಿಕ ಹಂತದಲ್ಲಿದ್ದ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತಷ್ಟು ತೀವ್ರಗೊಂಡು ಇದೀಗ ವಾಯುಭಾರ ಕಸಿತವಾಗಿ ಮಾರ್ಪಟ್ಟಿದೆ. ಈ ಭಾಗದಲ್ಲಿ ಗಾಳಿಯ ಬೀಸುವಿಕೆಯ ವೇಗ ಸಹ ನಿಧಾನವಾಗಿ ಹೆಚ್ಚಾಗುತ್ತಿದೆ. ಚಳಿ, ಶೀತ, ಮಂಜು ವಾತಾವರಣದ ಮಧ್ಯೆ ಭಾರಿ ಮಳೆ ಸೃಷ್ಟಿಗೆ ಇದೆ ಕಾರಣ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.