Karnataka Weather updates – ಅ. 8 ರಿಂದ 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

karnataka rain alert

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, October 8 ರಿಂದ 21 ವರೆಗೆ  ರಾಜ್ಯದ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾವ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ :

ಕರ್ನಾಟಕದಲ್ಲಿ ಮಳೆಯ ಅಬ್ಬರ (Karnataka Rains) ಮತ್ತೆ ಶುರುವಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ರಾಜ್ಯಾದಂತ ಮತ್ತೆ ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ  ಸಾಧಾರಣವಾಗಿ ಮಳೆಯಾಗುತ್ತಿದ್ದು, ಅಕ್ಟೋಬರ್ 9 ರಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿವೆ. ಹಾಗೆಯೇ ಉತ್ತರ ಒಳನಾಡಿನಲ್ಲಿ ಮತ್ತು ಮಲೆನಾಡ ಪ್ರದೇಶಗಳಲ್ಲೂ ಸಹ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

chanel

ಈ ಪ್ರದೇಶಗಳಲ್ಲಿ ಮಳೆಯ ಸಂಭವ ಹೆಚ್ಚು :

ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇವೆ. ಇನ್ನು ಬೆಂಗಳೂರು, ರಾಮನಗರ, ಉಡುಪಿ, ಉತ್ತರ ಕನ್ನಡ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತೀವ್ರ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಗಳು ಮೂಡಿಬಂದಿವೆ.

ಕಾವೇರಿ ಜಲಾಶಯಗಳ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಸೂಚನೆಯೂ ಕಾವೇರಿ ಜಲಾಶಯ ವಿಭಾಗದ ರೈತರಲ್ಲಿ ಹೊಸದಾದ ಭರವಸೆ ಮತ್ತು ಆಶೆಯನ್ನು ಮೂಡಿಸಿದೆ. ವದಂತಿಗಳನ್ನು ಪ್ರಕಾರ ಈ ಮಳೆಯೂ ಕೈಕೊಟ್ಟರೆ ಮುಂಬರುವ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದೆ.

ವಾರದ ಅಂತ್ಯದಲ್ಲಿ ಶುಕ್ರವಾರ ಮತ್ತು ಶನಿವಾರ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ದಾವಣಗೆರೆ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!