ಸರ್ಕಾರದಿಂದ ಪಡಿತರ ಚೀಟಿ ಹೊಂದಿದವರಿಗೆ  ಆಹಾರಧಾನ್ಯ ವಿತರಣೆ ಗುಡ್ ನ್ಯೂಸ್!

IMG 20241023 WA0005

ಪಡಿತರ ಚೀಟಿದಾರರಿಗೆ (Ration card holders) ಗುಡ್ ನ್ಯೂಸ್!. ಅಕ್ಟೋಬರ್(October) ತಿಂಗಳ ಪಡಿತರ ವಿತರಣೆ ನಿಗದಿತ ಅವಧಿಯೊಳಗೆ ಸಿಗಲಿದೆ.

ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಪಡಿತರ ಚೀಟಿ ಅಥವಾ ಬಿಪಿಎಲ್ ಕಾರ್ಡ್(BPL Ration card) ಬಹಳ ಮುಖ್ಯವಾಗಿದೆ. ಅದರಲ್ಲೂ ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ (government) ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ (document) ಒಂದು. ಇನ್ನು ಅರ್ಹ ಪಡಿತರ ಚೀಟಿಯನ್ನು ಹೊಂದಿದವರಿಗೆ ಸರ್ಕಾರದಿಂದ ಉಚಿತ ಆಹಾರವನ್ನು ನೀಡುತ್ತಿದೆ. ಅಕ್ಟೋಬರ್ ತಿಂಗಳಿನಿಂದ ಎನ್ಐಸಿ (NIC) ತಂತ್ರಾಂಶದಿಂದ ಬೇರ್ಪಡಿಸಿ ಕರ್ನಾಟಕ ಸ್ಟೇಟ್ ಡೆಟಾ ಸೆಂಟರ್(ಕೆಎಸ್‍ಡಿಸಿ)ನಿಂದ ಪಡಿತರ ವಿತರಣೆ ಕಾರ್ಯವನ್ನು ನಿರ್ವಹಿಸುತ್ತಿರುವುದರಿಂದ ಸರ್ವರ್ (Server) ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ವರ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಕೂಡ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ (Department of Civil Supplies and Consumer Affairs) ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಹಿಂದೆ ಪಡಿತರ ವಿತರಣೆಯನ್ನು ಎನ್‌ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ ಸರ್ಕಾರ ನಿರ್ಧರಿಸಿರುವ ಪ್ರಕಾರ ಅಕ್ಟೋಬರ್ ತಿಂಗಳಿನಿಂದ ಪಡಿತರ ವಿತರಣೆಯನ್ನು ಎನ್‌ಐಸಿ ತಂತ್ರಾಂಶದಿಂದ ಬೇರ್ಪಡಿಸಿ ಕರ್ನಾಟಕ ಸ್ಟೇಟ್ ಡೆಟಾ ಸೆಂಟರ್(ಕೆಎಸ್‍ಡಿಸಿ)ನಿಂದ ಪಡಿತರ ವಿತರಣೆ ಕಾರ್ಯವನ್ನು ನಿರ್ವಹಿಸಲಾಗುತ್ತದೆ.

ಎನ್‌ಐಸಿ ತಂತ್ರಾಂಶದಿಂದ ಬೇರ್ಪಡಿಸಿರುವುದರಿಂದ ತೊಂದರೆ ಏನಾಗುತ್ತಿದೆ?:

ಅಕ್ಟೋಬರ್ ತಿಂಗಳಿನಿಂದ ಪಡಿತರ ವಿತರಣೆಯನ್ನು  ಕರ್ನಾಟಕ ಸ್ಟೇಟ್ ಡೆಟಾ ಸೆಂಟರ್(ಕೆಎಸ್‍ಡಿಸಿ)ನಿಂದ ಕಾರ್ಯನಿರ್ವಹಿಸಲಾಗುತ್ತದೆ. ಇದರಿಂದ ಪಡಿತರ ವಿತರಣೆಯನ್ನು ಮಾಡಲು ಸರ್ವರ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರ್ವರ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರ ಬಗ್ಗೆ ಜನರು ಆತಂಕ ಪಡಬೇಕಿಲ್ಲ. ಈ ಸಮಸ್ಯೆಯನ್ನು ಈಗಾಗಲೇ ಕೇಂದ್ರ ಕಚೇರಿಯ ಗಮನಕ್ಕೆ ತರಲಾಗಿದೆ. ಆದ್ದರಿಂದ ಜನರಿಗೆ ಸರಿಯಾದ ಸಮಯಕ್ಕೆ ಅವರ ಆಹಾರ ವಿತರಣೆಯಾಗುತ್ತದೆ ಆದ್ದರಿಂದ ಎಲ್ಲರೂ ನಿರ್ಭೀತಿಯಿಂದ ಇರಬಹುದು.

ಪಡಿತರ ಚೀಟಿದಾರರಿಗೆ ಸರ್ಕಾರ ನೀಡಿದ ಗುಡ್ ನ್ಯೂಸ್ ಏನು?:

ಧಾರವಾಡ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುವ ಪ್ರಕಾರ ಈ ತಿಂಗಳ ಅಂದರೆ ಅಕ್ಟೋಬರ್ ತಿಂಗಳ ಪಡಿತರ ವಿತರಣೆಯನ್ನು ನಿಗದಿತ ಸಮಯದೊಳಗೆ ನೀಡಲಾಗುತ್ತದೆ. ಈ ಬಗ್ಗೆ ಪಡಿತರ ಚೀಟಿದಾರರು ಯಾವುದೇ ರೀತಿಯ ಭಯವಿಟ್ಟುಕೊಳ್ಳದೆ ನಿರ್ಭೀತಿಯಿಂದ ಇರಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!