ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್ ರದ್ದಿನ ಕುರಿತಾದ ಗೊಂದಲಗಳ ಬಗ್ಗೆ ಮುನಿಯಪ್ಪನವರು ನೀಡಿರುವ ಹೇಳಿಕೆಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಕರ್ನಾಟಕ ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಅದೇನೆಂದರೆ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುಗಳನ್ನು ಸದ್ಯಕ್ಕೆ ರಾಜ್ಯದಲ್ಲಿ ರದ್ದು ಮಾಡಲಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. ಇದರ ಕುರಿತಾದ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ವೈಟ್ ಬೋರ್ಡ್ ಇದ್ದವರ ಪಡಿತರ ಚೀಟಿಗಳು(Ration card) ಸದ್ಯಕ್ಕೆ ರದ್ದಾಗುವುದಿಲ್ಲ :
ನಿಮಗೆಲ್ಲರಿಗೂ ತಿಳಿದಿರುವಂತೆ, ವೈಟ್ ಬೋರ್ಡ್ ಕಾರುಗಳನ್ನು ಹೊಂದಿರುವವರ ಪಡಿತರ ಚೀಟಿ ರದ್ದಾಗುತ್ತದೆ ಎಂದು ಈ ಹಿಂದೆ ರಾಜ್ಯ ಸರ್ಕಾರವು ಸುದ್ದಿಗೋಷ್ಠಿ ಒಂದರಲ್ಲಿ ಹೇಳಿದ್ದರು. ಆದರೆ, ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಸದ್ಯಕ್ಕೆ ಯಾವುದೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವೈಟ್ ಬೋರ್ಡ್ ಕಾರುಗಳನ್ನು ಹೊಂದಿರುವವರ ಬಿಪಿಎಲ್ ಕಾರ್ಡುಗಳನ್ನು(BPL card) ಸದ್ಯಕ್ಕೆ ರದ್ದು ಮಾಡುವ ಯೋಚನೆ ಇಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ 3 ಲಕ್ಷ ಜನರ ಪಡಿತರ ಚೀಟಿಯ ಅರ್ಜಿಗಳು ಬಾಕಿ ಇದ್ದು, ಅವುಗಳನ್ನು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ಗಳನ್ನು ಕೊಡಬೇಕಾ ಎಂದು ನಿರ್ಧರಿಸಿ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಬ್ಯಾಂಕ್ ಖಾತೆ ಇಲ್ಲದವರ ಕಾರ್ಡ್ ಗಳು ಕೂಡ ರದ್ದಾಗಿದ್ದವು, ಅವುಗಳ ಮೇಲೆ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮುನಿಯಪ್ಪನವರ ಈ ಹೇಳಿಕೆಯಿಂದಾಗಿ, ಬಿಪಿಎಲ್ ಕಾರ್ಡ್ ಗಳ ರದ್ದಿಗೆ ಕುರಿತಾದ ಅನೇಕ ಊಹಾಪೂಹಗಳಿಗೆ ತೆರೆ ಬಿದ್ದಿದೆ ಎಂದು ಹೇಳಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ಕುರಿತಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ