ಪಡಿತರ ಚೀಟಿದಾರರಿಗಾಗಿ ‘ ಇ-ಕೆವೈಸಿ(E-KYC)’ ಕಡ್ಡಾಯ: ಆಗಸ್ಟ್ 31ರೊಳಗೆ ಕುಟುಂಬದ ಸದಸ್ಯರ ಮಾಹಿತಿ ನವೀಕರಿಸಿ
ಕರ್ನಾಟಕ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೊಂದು ಮಹತ್ವದ ಸೂಚನೆ:
E-KYC Mandatory for Ration Card Holders: Update Family Member Details by August 31//: 2024 ಆಗಸ್ಟ್ 31ರೊಳಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ‘ಈ-ಕೆವೈಸಿ’ (Electronic-Know Your Customer) ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಸಂಪೂರ್ಣವಾಗಿ ಪಾಲಿಸಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು, ‘ಈ-ಕೆವೈಸಿ’ ಪೂರ್ಣಗೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳ್ಳಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ಪಡಿತರ ಚೀಟಿದಾರರು ತಮ್ಮ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಹೋಗಿ, ಬೆಳಿಗ್ಗೆ 7.00 ಗಂಟೆಯಿಂದ ರಾತ್ರಿಯ 9.00 ಗಂಟೆಯೊಳಗೆ ಈ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು.
ಈ-ಕೆವೈಸಿ ಪ್ರಕ್ರಿಯೆ ಏಕೆ ಕಡ್ಡಾಯವಾಗಿದೆ?
ಈ-ಕೆವೈಸಿ ಪ್ರಕ್ರಿಯೆ ಮೂಲಕ ಪಡಿತರ ಚೀಟಿದಾರರ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಹಾಗೂ ಹಗರಣಗಳನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈಗಿನ ಪಡಿತರ ವ್ಯವಸ್ಥೆಯಲ್ಲಿ ಕೆಲವರು ಅನಧಿಕೃತವಾಗಿ ಪಡಿತರ ಪಡೆಯುತ್ತಿರುವುದು ಕಂಡುಬಂದಿದೆ. ಇಂತಹ ದುರ್ಪಯೋಗವನ್ನು ತಪ್ಪಿಸುವುದು ಹಾಗೂ ಸರಿಯಾದ ಅರ್ಹರು ಮಾತ್ರ ಪಡಿತರ ಪಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಪಡ್ಡಿತರ ಸ್ಥಗಿತ:
ಆಗಸ್ಟ .31 ರೊಳಗೆ ಈ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಚೀಟಿದಾರರು ತಮ್ಮ ಪಡಿತರ ಹಂಚಿಕೆಯನ್ನು ಮುಂದಿನ ತಿಂಗಳುಗಳಿಂದ ಪಡೆಯಲು ಸಾಧ್ಯವಿರುವುದಿಲ್ಲ. ಇದು ಸಾಮಾನ್ಯ ಜನರ ಮೇಲೆ ತೀವ್ರ ಪರಿಣಾಮ ಬೀರಬಹುದಾದ್ದರಿಂದ, ಈ ಸಮಯಾವಕಾಶವನ್ನು ದುಡಿಸಿಕೊಳ್ಳುವಂತೆ ಅವಿನ್ ಆರ್. ಅವರು ಸೂಚಿಸಿದ್ದಾರೆ.
ಇದು ಪಡಿತರ ವ್ಯವಸ್ಥೆಯ ಸುಧಾರಣೆಗಾಗಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಎಲ್ಲರಿಗೂ ಅನುಕೂಲವಾಗಲು ಮತ್ತು ಯಾವುದೇ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.