ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಯಾರೆಲ್ಲರ ಬಿಪಿಎಲ್ ಪಡಿತರ ಚೀಟಿಯನ್ನು(BPL Ration card) ರದ್ದು ಮಾಡಲಾಗುವುದು ಎಂದು ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡಿನ ಅವಶ್ಯಕತೆ ಯು ಎಲ್ಲರಿಗೂ ಹೆಚ್ಚಾಗಿದೆ. ಯಾವುದೇ ಯೋಜನೆಗಳ ಫಲವನ್ನು ಪಡೆಯಬೇಕೆಂದರೆ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಎಪಿಎಲ್ ರೇಷನ್ ಕಾರ್ಡ್ ಅವಶ್ಯವಾಗಿದೆ. ಬಿಪಿಎಲ್ ರೇಷನ್ ಕಾರ್ಡಿನ ಅವಶ್ಯಕತೆಯೂ ಹೆಚ್ಚಾದ ಇಂತಹ ಸಮಯದಲ್ಲಿ ಸರ್ಕಾರವು ಒಂದು ನಿರ್ಧಾರವನ್ನು ಕೈಗೊಂಡಿದೆ. ಅದೇನೆಂದರೆ, ಬಿಪಿಎಲ್ ಕಾರ್ಡ್ ಹೊಂದಿದವರ ಮನೆಯಲ್ಲಿ ಸ್ವಂತ ಕಾರು(car) ಇದ್ದರೆ, ಅಂಥವರ ಕಾರ್ಡನ್ನು ರದ್ದು ಮಾಡಲಾಗುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ :
ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ದುಡಿಮೆಗಾಗಿ ಕಾರನ್ನು ತೆಗೆದುಕೊಂಡವರ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸುವುದಿಲ್ಲ ಅಂದರೆ ಎಲ್ಲೋ ಬೋರ್ಡ್ ಹೊಂದಿರುವ ಕಾರುಗಳು ಇದ್ದರೆ ಅಂತವರ ಕಾರ್ಡನ್ನು ರದ್ದು ಮಾಡುವುದಿಲ್ಲ, ಎಂದು ಸಚಿವರು ಇದೇ ವೇಳೆ ಸ್ಪಷ್ಟನೆಯನ್ನು ನೀಡಿದ್ದಾರೆ.
ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ನಲ್ಲಿ ಉಚಿತ ಅಕ್ಕಿ ಬೇಕಾ ಎಂಬ ಪ್ರಶ್ನೆ ಹುಟ್ಟು ಹಾಕಿದ್ದಾರೆ. ಈ ಮೂಲಕ ಸ್ವಂತ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುಳಿವನ್ನ ಆಹಾರ ಸಚಿವ ಮುನಿಯಪ್ಪ ಕೊಟ್ಟಿದ್ದಾರೆ. ವಿಧಾನಸೌಧದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು ಸೆಪ್ಟೆಂಬರ್ ತಿಂಗಳಿನಿಂದ ಪುನಹ 5 ಕೆಜಿಯ ಅಕ್ಕಿಯ ಬದಲಾಗಿ 10 ಕೆಜಿಯನ್ನು ನೀಡಲಾಗುವುದು. ಏಕೆಂದರೆ ಎಲ್ಲಾ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ಹಣವನ್ನು ವಿತರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿಕೆಯನ್ನು ಕೊಟ್ಟಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಲು ಇವರು ಅನರ್ಹರು :
ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ಸರ್ಕಾರಿ ನೌಕರರು, ಇತರ ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಸಂಸ್ಥೆಗಳು (ಪಿಎಸ್ಯು) ಅಥವಾ ಸರ್ಕಾರಿ ನೆರವಿನ ಸ್ವಾಯತ್ತ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರು, ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ಗಿಂತ ಹೆಚ್ಚು ಭೂಮಿ ಹೊಂದಿರುವ ಕುಟುಂಬಗಳು ಮತ್ತು ₹1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ಗಳಿಗೆ ಅನರ್ಹರಾಗಿರುತ್ತಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣ, ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದವರಿಗೆ ಕಾರ್ಡನ್ನು ವಿತರಿಸಿರಲಿಲ್ಲ, ಈಗ ಹೊಸದಾಗಿ ಅರ್ಜಿಯನ್ನು ಸಲ್ಲಿಸಿದವರಿಗೂ ಕೂಡ ಕಾರ್ಡನ್ನು ವಿತರಿಸಲು ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ.
ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್👇👇👇👇
ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ