ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ,ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಜಮಾ ಆಗಿರುವ ಬಗ್ಗೆ ಮಾಹಿತಿನ ನೀಡಲಾಗುತ್ತದೆ . ಇಂದು ಆಗಸ್ಟ್ 30 ಗೃಹಲಕ್ಷ್ಮಿ ಯೋಜನೆಗೆ CM ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಇಂದು ಡಿ ಬಿ ಟಿ ಮೂಲಕ 2,000 ಜಮಾ ಮಾಡಲಾಗಿದೆ. ಇನ್ನು ಕೆಲವು ಮಹಿಳೆಯರಿಗೆ ಹಣ ಬಂದಿರುವುದಿಲ್ಲ ಇದಕ್ಕೆ ಏನು ಕಾರಣ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ 2000/- ಹಣ ಇಂದಿನಿಂದಲೇ ಖಾತೆಗೆ :
ಇದೇ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಏಕಕಾಲಕ್ಕೆ ರಾಜ್ಯದ ಯಜಮಾನಿಯರಿಗೆ 2 ಸಾವಿರ ರೂ ಜಮಾ ಆಗಲಿದೆ. ಈ ಬೃಹತ್ ಸಮಾರಂಭಕ್ಕೆ ಲಕ್ಷ್ಯಕೂ ಹೆಚ್ಚಿನ ಮಹಿಳೆಯರು ಆಗಮನ ನೀಡುವ ಸಾಧ್ಯತೆ ಇದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ಜೋರಾಗಿದೆ. 80×60 ವೇದಿಕೆ, 114 ಅಡಿ ಎಲ್ಇಡಿ ಟಿವಿ, 1 ಲಕ್ಷ ಜನ ಕೂರಲು ಆಸನ, ಮೈದಾನದ ತುಂಬೆಲ್ಲ ರೈನ್ ಪ್ರೂಫ್ ಜರ್ಮನ್ ಟೆಂಟ್, ಪ್ರತಿ ಬ್ಲಾಕ್ಗೆ ಎಲ್ಇಡಿ ಪರದೆ, ಶೌಚಗೃಹ, ಕುಡಿಯುವ ನೀರು ಹೀಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತಂದು ಸಮಾರಂಭದಲ್ಲಿ ತಮ್ಮ ಗ್ಯಾರಂಟಿ ಯೋಜನೆಯ ಯಶಸ್ಸಿನ ಪ್ರದರ್ಶನವನ್ನು ಮೆರಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಈ ಕೆಳಗಿನವರಿಗೆ ಹಣ ಬರೋದಿಲ್ಲ :
ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯಿತ್ತದೆ.
ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? Gruhalakshmi Cancelled List
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.
ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :
ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, 2000 ಹಣ ಜಮಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ