ರಾಜ್ಯ ಸರ್ಕಾರದಿಂದ  ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

loan and subsidy schemes

ಅದ್ಭುತ ಸುದ್ದಿ! SC ಸಮುದಾಯಕ್ಕೆ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರ(state government)ದ ವಿವಿಧ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿಯ(SC) ಜನಾಂಗದವರಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಪರಿಚಯಿಸಿದ್ದು, ಅವುಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ(Dr. BR Ambedkar Development Corporation), ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ(Karnataka Adijambava Development Corporation), ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ(Karnataka Bhovi Development Corporation), ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ(Karnataka State Safai Karmachari Development Corporation) ಇವುಗಳಿಂದ ಈ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಬನ್ನಿ ಈ ಯೋಜನೆಗಳು ಕುರಿತು ಹೆಚ್ಛಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಮೈಕ್ರೋ ಕ್ರೆಡಿಟ್ ಯೋಜನೆ(Micro Credit Scheme):

ಈ ಯೋಜನೆಯಡಿಯಲ್ಲಿ, ನೋಂದಾಯಿತ ಮಹಿಳಾ ಸ್ವ ಸಹಾಯ ಸಂಘಗಳಿಗೆ (10 ಸದಸ್ಯರ ಸಂಘ) ಸಾಲ(loan) ಹಾಗೂ ಸಹಾಯಧನ(subsidy)ವನ್ನು ನೀಡಲಾಗುತ್ತದೆ. ವಿರಾಜಪೇಟೆಯಲ್ಲಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 1 ಸಂಘಕ್ಕೆ (10 ಸದಸ್ಯರ ಸಂಘ) ಈ ಸೌಲಭ್ಯವನ್ನು ನೀಡಲಾಗುತ್ತಿದೆ.  ಈ ಯೋಜನೆಯು ಮಹಿಳೆಯರಿಗೆ ಸ್ವ-ಸಾಕಾರಗೊಳ್ಳಲು ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ

ಗಂಗಾ ಕಲ್ಯಾಣ ಯೋಜನೆ(Ganga Welfare Scheme):

ಬರಗಾಲದ ಭೀತಿಯಿಂದ ರೈತರನ್ನು ಕಾಪಾಡಲು ಕರ್ನಾಟಕ ಸರ್ಕಾರವು ಹೊಸ ಯೋಜನೆ ಜಾರಿಗೆ ತಂದಿದೆ. ಗಂಗಾ ಯೋಜನೆ ಎಂದು ಕರೆಯಲ್ಪಡುವ ಈ ಯೋಜನೆಯು 1 ರಿಂದ 5  ಎಕರೆ ವ್ಯವಸಾಯ ಜಮೀನು ಹೊಂದಿರುವ ಅರ್ಹ ರೈತರಿಗೆ ಉಚಿತ ಕೊಳವೆ ಬಾವಿ(Free tube well) ಕಲ್ಯಾಣ ಮತ್ತು ನೀರಾವರಿ ಸೌಲಭ್ಯವಿದೆ.

ಈ ಯೋಜನೆಯಡಿಯಲ್ಲಿ, 1 ರಿಂದ 5 ಎಕರೆ ವ್ಯವಸಾಯದ ಜಮೀನು ಹೊಂದಿರುವ ಅರ್ಹ ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಬಹುದು. ಈ ಯೋಜನೆಯು, ಫಲಾಪೇಕ್ಷಿಯ ಜಮೀನಿನಲ್ಲಿ ಕೊಳವೆ ಬಾವಿಯನ್ನು ಕೊರೆದು ಪಂಪ್ ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ. ವಿರಾಜಪೇಟೆ ಕ್ಷೇತ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 13, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 10, ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 1 ಕೊಳವೆ ಬಾವಿಗಳನ್ನು ಕೊರೆದು ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಉದ್ಯಮಶೀಲತಾ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ)Entrepreneurship Scheme(in association with Banks):

ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲವಾಗಿ ಪಡೆಯಬಹುದು. ವಿರಾಜಪೇಟೆಯಲ್ಲಿ ಈ ಯೋಜನೆಯ 2 ಗುರಿಗಳು ಅಳವಡಿಸಲಾಗಿದೆ.

ಟ್ಯಾಬ್ ವಿತರಣೆ ಯೋಜನೆ(Tab Distribution Scheme):

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಈ ಯೋಜನೆ ಅಡಿ, ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತರ ಮಕ್ಕಳಿಗೆ, 8ನೇ ತರಗತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ, ಆನ್ಲೈನ್ ಪಾಠಗಳನ್ನು ಕೇಳಲು ಅನುಕೂಲವಾಗುವಂತೆ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಟ್ಯಾಬ್(Tablet) ಉಚಿತವಾಗಿ ವಿತರಿಸಲಾಗುವುದು. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಮೂಲಕ, ಡಿಜಿಟಲ್ ಶಿಕ್ಷಣದ ಅವಕಾಶಗಳಿಂದ ವಂಚಿತವಾಗಿದೆ ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 29 ಆಗಿದೆ. ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿಗಳನ್ನು ಪಡೆಯಲು, ಜಿಲ್ಲಾಧಿಕಾರಿ ಕಚೇರಿಯ ದೂ.ಸಂ. 08272-228857ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಪ್ಪ ತಿಳಿಸಿದ್ದಾರೆ.

ಈ ಯೋಜನೆಗಳು ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಯನ್ನು ಒದಗಿಸಿಕೊಡಲು ಮಹತ್ವದ ಹೆಜ್ಜೆಯಾಗಿವೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!