ಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

shakti scheme update

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.

ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಸಾಕು ಉಚಿತ ಪ್ರಮಾಣ:

shakti scheme update from govt

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು “ಶಕ್ತಿ ಯೋಜನೆ”ಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ.

ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಸಹ ಮೊಬೈಲ್‌ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನಾವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿದ್ದವು, ಆದಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಸರ್ಕಾರವು ಆದೇಶವನ್ನು ನೀಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಇನ್ನು ಮುಂದೆ ಬಸ್ಸಿನಲ್ಲಿ ಯಾವುದಾದರೂ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಬಹುದು :

ಸಂಚಾರ ವ್ಯವಸ್ಥಾಪಕರು (ಕಾ), ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ, ಬೆಂಗಳೂರು ಅವರು ಇದಕ್ಕೆ ಆದೇಶವನ್ನು ನೀಡಿದ್ದಾರೆ. ಈ ಸಂಬಂಧ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ.

ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – Jio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ  ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಇದನ್ನೂ ಓದಿ – ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ – Home Loan- ಹೋಮ್ ಲೋನ್ ತಗೋಳ್ಳೋ ಮೊದಲು ಈ ವಿಷಯಗಳು ಗೊತ್ತಿರಲಿ.!

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!