SM krishna passed away: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಮಂಗಳವಾರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
92 ವರ್ಷದ ಹಿರಿಯ ರಾಜಕಾರಣಿ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಇದಕ್ಕೂ ಮೊದಲು ಅವರು ವಿಧಾನಸಭೆ ಸ್ಪೀಕರ್ ಆಗಿ ಕೆಲಸ ಮಾಡಿದ್ದರು. ನಂತರ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾದರು. ನಂತರ 2009ರಿಂದ 2012ರವರೆಗೆ ಯುಪಿಎ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದರು. ನಂತರ ಕೃಷ್ಣ ಬಿಜೆಪಿ ಸೇರಿದರು. ಕಳೆದ ವರ್ಷ, ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು ನೀಡಲಾಯಿತು.
ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಸ್‌ಎಂ ಕೃಷ್ಣ ನಿಧನ :
“ಎಸ್‌ಎಂ ಕೃಷ್ಣ ಇನ್ನಿಲ್ಲ. ಅವರು ಮುಂಜಾನೆ 2:45 ಕ್ಕೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಪಾರ್ಥಿವ ಶರೀರವನ್ನು ಇಂದು ಮದ್ದೂರಿಗೆ ಕೊಂಡೊಯ್ಯುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ. ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್‌ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು.
ಮಂಡ್ಯ ಜಿಲ್ಲೆಯ ಸೋಮನಹಳ್ಳಿ ತಾಲೂಕಿನಲ್ಲಿ ಜನಿಸಿದ ಇವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿದ್ದರು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು,
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.