ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷಾ ಮೌಲ್ಯಮಾಪನ ಕಾರ್ಯ ಏಪ್ರಿಲ್ 15ರಿಂದ ಆರಂಭವಾಗಿದ್ದು ಮುಂದಿನ 20 ದಿನಗಳಲ್ಲಿ ಮುಗಿಯುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಮೊನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದೇ ಏಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ 2024
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶಗಳನ್ನು ಇದೇ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದ್ದು, ಮಂಡಳಿ ಅಧಿಕೃತ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗುತ್ತದೆ. ಆದರೆ ಮಂಡಳಿಯು ಈ ಬಗೆ ಯಾವುದೇ ಅಧಿಕೃತ ಘೋಷಣೆ ಇದುವರೆಗೂ ಮಾಡಿಲ್ಲ.
SSLC Result Date :
ಈಗಾಗಲೇ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು. ಮುಂದಿನ 20 ದಿನಗಳಲ್ಲಿ ಮಾಪನ ಕಾರ್ಯ ಮುಗಿಯುವ ಸಾಧ್ಯತೆಯಿದ್ದು. ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಗಳಲ್ಲಿ ಮಾತ್ರ ವೀಕ್ಷಿಸಬಹುದು. ಫಲಿತಾಂಶ ಪ್ರಕಟಿಸಲು ಸರ್ಕಾರ ಯಾವುದೇ ಅಧಿಕೃತ ಆಪ್ ಬಿಡುಗಡೆ ಮಾಡಿಲ್ಲ. ಆದ್ದರಿಂದ ಖಾಸಗಿ ಆಪ್ ಗಳ ಹಾವಳಿಯಿಂದ ಎಚ್ಚರ!
SSLC ಫಲಿತಾಂಶ ಗ್ರೇಡ ಸಿಸ್ಟಮ್
563-625 ಅಂಕಗಳು ಎ+ ಗ್ರೇಡ್
500-562 ಅಂಕಗಳು ಎ ಗ್ರೇಡ್
438-499 ಅಂಕಗಳು B+ ಗ್ರೇಡ್
375-437 ಅಂಕಗಳು ಬಿ ಗ್ರೇಡ್
313-374 ಅಂಕಗಳು C+ ಗ್ರೇಡ್
219-312 ಅಂಕಗಳು C ಗ್ರೇಡ್
ಫಲಿತಾಂಶ ನೋಡುವುದು ಹೇಗೆ?
ಈ ಕೆಳಗಿನ ಅಧಿಕೃತ ವೆಬ್ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ :
ಈ ಮೇಲಿನ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಡೇಟ್ ಆಫ್ ಬರ್ತ್ ಎಂಟರ್ ಮಾಡಿ Sumbit ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಫಲಿತಾಂಶ ಕಾಣುತ್ತದೆ. ಫಲಿತಾಂಶ ವನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರಿಂಟ್ ತೆಗೆದುಕೊಳ್ಳಬಹುದು.
ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಕರವಾದ ಮತ್ತು ಸ್ಪಷ್ಟ ಮಾಹಿತಿ ತಕ್ಷಣ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಈ ಮಾಹಿತಿಗಳನ್ನು ಓದಿ
- ಪ್ರತಿ ತಿಂಗಳ ನೇರವಾಗಿ ಖಾತೆಗೆ ಬರುವ ಜಿಂದಾಲ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿ.
- ಈ ವಿದ್ಯಾರ್ಥಿಗಳಿಗೆ 50 ರಿಂದ 1 ಲಕ್ಷ ವರೆಗೂ ಉಚಿತ ವಿದ್ಯಾರ್ಥಿವೇತನ, ತಪ್ಪದೇ ಅರ್ಜಿ ಸಲ್ಲಿಸಿ
- ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಲು, ಸರ್ಕಾರದಿಂದ ಹೊಸ ಕಾರ್ಡ್ ವಿತರಣೆ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..