ಕಾರ್ಮಿಕ ವರ್ಗದವರು(Working class) ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಕೊನೆಯ ದಿನಾಂಕ ಯಾವಾಗ? ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ.
marriage grant for labours:// ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳ ಮದುವೆಗಳಿಗೆ ಸರ್ಕಾರವು ಆರ್ಥಿಕ ಸಹಾಯಧನವನ್ನು ಒದಗಿಸುತ್ತಿದೆ. ಈ ಯೋಜನೆಯು ಕಾರ್ಮಿಕರ ಕಲ್ಯಾಣವನ್ನು ಉತ್ತೇಜಿಸಲು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆಯನ್ನು(Financial security) ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಯಾವೆಲ್ಲ ಅರ್ಹತೆಗಳು ಇರಬೇಕು? ಹಾಗೂ ಅಗತ್ಯ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮದುವೆ ಸಹಾಯಧನದ ಪರಿಚಯ:
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ರೂ.60,000/- ಸಹಾಯಧನವನ್ನು(subsidy) ಒದಗಿಸುತ್ತದೆ. ಈ ಯೋಜನೆಯು ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವನ್ನು(Financial ) ನೀಡುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಮದುವೆಯ ದಿನಾಂಕದವರೆಗೆ ಕನಿಷ್ಠ ಒಂದು ವರ್ಷ ಮಂಡಳಿಯ ಸದಸ್ಯತ್ವವನ್ನು ಪೂರೈಸಿರಬೇಕು.
ಒಂದು ಕುಟುಂಬವು ಎರಡು ಬಾರಿ(twice) ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹವಾಗಿರುತ್ತದೆ.
ಅರ್ಜಿದಾರರು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.
ಮದುವೆಯ ದಿನಾಂಕದಿಂದ ಆರು ತಿಂಗಳೊಳಗೆ(Within six months) ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ನೋಂದಣಿ ಪ್ರಮಾಣಪತ್ರ(ಕಾರ್ಮಿಕರ ನೋಂದಣಿ ಪ್ರಮಾಣಪತ್ರದ ಪ್ರತಿ).
ಮದುವೆ ಪ್ರಮಾಣಪತ್ರ.
ಆಧಾರ್ ಕಾರ್ಡ್.
ಜನನ ಪ್ರಮಾಣಪತ್ರ.
ಬ್ಯಾಂಕ್ ಖಾತೆ ವಿವರಗಳು.
ಸಹಾಯಧನವನ್ನು ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಿಂದ https://klwbapps.karnataka.gov.in/ ಅರ್ಜಿಯನ್ನು ಡೌನ್‌ಲೋಡ್ ಮಾಡಬಹುದು.
ಡೌನ್‌ಲೋಡ್ ಮಾಡಿದಮೇಲೆ ಅರ್ಜಿಯಲ್ಲಿ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
ನಂತರ ಅಗತ್ಯ ದಾಖಲೆಗಳನ್ನು ಅರ್ಜಿಗೆ ಲಗತ್ತಿಸಬೇಕ, ಭರ್ತಿಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಸಂಬಂಧಿತ ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಗೆ(Labor Department Office) ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವೇನು?
ಮದುವೆಯ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.
ಈ ರೀತಿಯಾಗಿ, ಕರ್ನಾಟಕ ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಮದುವೆ ಸಹಾಯಧನ ಯೋಜನೆಯು ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವನ್ನು ಒದಗಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಸಹಕಾರಿಯಾಗಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ತಕ್ಷಣವೇ ಅರ್ಜಿ ಸಲ್ಲಿಸುವುದು ಶ್ರೇಯಸ್ಕರ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.