ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

subsidy on land purchase

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು ಸಾಲಸೌಲಭ್ಯ ನೀಡಲಾಗುತ್ತದೆ. ಹಾಗೆಯೇ ಈ ಯೋಜನೆ ಮುಖ್ಯವಾಗಿ ಯಾರಿಗೆ ಅನ್ವಯಿಸುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ ಹೀಗಿದೆ.

ಈ ಒಂದು ಯೋಜನೆಯ ಮುಖ್ಯ ಉದ್ದೇಶ ( Purpose ) :

ಮಹಿಳಾ ಕೃಷಿ ಕಾರ್ಮಿಕರು ಮತ್ತು ರೈತರು ಯಾರೂ ನಿರುದ್ಯೋಗ ದಲ್ಲಿ ಇರುವುದು ಬೇಡ ಅದರ ಬದಲಾಗಿ ಭೂ ಖರೀದಿಸಿ ಸ್ವಂತ ಉದ್ಯೋಗ ಪಡೆದುಕೊಳ್ಳಬೇಕು.ಹಾಗೂ ಸರ್ಕಾರ ದಿಂದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ತಮ್ಮ ವಾಸ ಸ್ಥಳದಿಂದ 10 ಕಿ.ಮೀ ವ್ಯಾಪ್ತಿಯೊಳಗೆ ಕೃಷಿಯೋಗ್ಯವಾದ 02 ಎಕರೆ ಖುಷ್ಕ ಅಥವಾ 01 ಎಕರೆ ತರಿ ಜಮೀನು ಖರೀದಿಸಲು ಸಹಾಯಧನ ಮತ್ತು ಸಾಲ ನೀಡಲಾಗುತ್ತದೆ.

ಭೂ ಒಡೆತನ ಯೋಜನೆಯಡಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಿಗೆ ನಿಗದಿಪಡಿಸಿರುವ ಘಟಕ ವೆಚ್ಚ ರೂ. 25 ಲಕ್ಷ ಹಾಗೂ ಇನ್ನೂಳಿದ ಜಿಲ್ಲೆಗಳಿಗೆ ರೂ. 20 ಲಕ್ಷ ನೀಡಲಾಗುತ್ತದೆ. ಇದರಲ್ಲಿ ಶೇ 50% ರಷ್ಟು ಸಹಾಯಧನ ಮತ್ತು ಇನ್ನೂಳಿದ ಶೇ 50% ಸಾಲ ನೀಡುತ್ತಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಭೂ ಖರೀದಿಸಲು ( Land Purchase Scheme ) ಬೇಕಾಗುವ ಮುಖ್ಯ ದಾಖಲೆಗಳು :

ಭಾವಚಿತ್ರ
ಜಾತಿ ಪ್ರಮಾಣ ಪತ್ರ (Caste Certificate)
ಆದಾಯ ಪ್ರಮಾಣಪತ್ರ (Income Certificate)
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ )
ಕೃಷಿ ಕಾರ್ಮಿಕರ ದೃಡೀಕರಣ ಪತ್ರ

tel share transformed

ಈ ಭೂ ಒಡೆತನ ಯೋಜನೆಗೆ ( Bhoo Odetana Yojane ) ಯಾರು ಅರ್ಜಿ ಸಲ್ಲಿಸಬಹುದು?

ಭೂ ಒಡೆತನ ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಾ. ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.

ವಿಶೇಷ ಸೂಚನೆ :

ಈಗಾಗಲೇ 2023-2024 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಭೂ ಒಡೆತನ ಯೋಜನೆಯ ಅರ್ಜಿ ಆಹ್ವಾನಿಸಲಾದೆ.

ಭೂಮಿ ಖರೀದಿಸಲು ಸರ್ಕಾರದ ನೀಡುತ್ತಿರುವ ಸಾಲ ಸೌಲಭ್ಯಕ್ಕೆ ( Land Purchase Scheme ) ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಪೊರ್ಟಲ್ ಮೂಲಕ ಆನ್‌ಲೈನ್(online) ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.

whatss

ಪ್ರಮುಖ ದಿನಾಂಕಗಳು ( Last Date ) :

ಭೂ ಒಡೆತನ ಯೋಜನೆಗೆ ಅರ್ಜಿ ಸಲ್ಲಿಕೆ ಕೊನೆಯ
ಡಿಸೆಂಬರ್ : 15-12-2023

ಭೂ ಒಡೆತನಯೋಜನೆಗಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ :

ಅಧಿಕೃತ ವೆಬ್‌ಸೈಟ್: sevasindhu.karnataka.gov.in

ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀಡಿದ ವಿಷೇಶ ಸೂಚನೆಗಳು ಮತ್ತು ನಿಯಮಗಳು ( rules ) :

ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೊರ್ಟಲ್ ಮೂಲಕವೇ ಸಲ್ಲಿಸುವುದು. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಫಲಾಪೇಕ್ಷಿಗಳು ‘ಗ್ರಾಮ ಒನ್, ‘ಬೆಂಗಳೂರು ಒನ್(Bengaluru one)’, ‘ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಮತ್ತು ನಿಯಮಗಳು : ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

One thought on “ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Leave a Reply

Your email address will not be published. Required fields are marked *

error: Content is protected !!