ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ! ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Image 2024 01 26 at 4.38.51 PM

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! 347 ‘ಸರ್ವೆಯರ್'(Surveyor) ಹುದ್ದೆಗಳ ನೇಮಕಾತಿ(Recruitment) ಶೀಘ್ರದಲ್ಲೇ ನಡೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ, 2024 ಜನವರಿ 25:

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಶೀಘ್ರದಲ್ಲಿಯೇ ರಾಜ್ಯದಲ್ಲಿ 347 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಅವರು ಇತ್ತೀಚಿಗೆ ನಡೆಸಿದ ಸುದ್ದಿಗೋಷ್ಠಿ(Press conference) ಯಲ್ಲಿ ಈ ಮಾಹಿತಿಯನ್ನು ನೀಡಿದರು. 347 ಸರ್ವೇಯರ್ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ ಎಂದು ಅವರು ತಿಳಿಸಿದರು.

592 ಸರ್ವೇಯರ್ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Chief minister, Siddaramaiah) ಅವರು ತಾತ್ವಿಕ ಸಕಾರಾತ್ಮಕ ಒಪ್ಪಿಗೆ ನೀಡಿದ್ದಾರೆ. ಈ ಹುದ್ದೆಗಳ ಭರ್ತಿಗೆ ಸಹ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಪರವಾನಗಿ ಪಡೆದ 748 ಸರ್ವೇಯರ್‌ಗಳಿಗೆ ತರಬೇತಿ ನೀಡಲಾಗುತ್ತಿದೆ. ಆಯಾ ಜಿಲ್ಲೆಗಳ ಅಗತ್ಯತೆಗೆ ಅನುಗುಣವಾಗಿ ಈ ಸರ್ವೇಯರ್‌ಗಳನ್ನು ಕಳುಹಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.

tel share transformed

‘ಸರ್ವೇಯರ್’ ಹುದ್ದೆ :

ಸರ್ವೇಯರ್‌ಗಳು ಭೂಮಿಯ ಚಿತ್ರವನ್ನು ಬರೆಯುವ ಕಾರ್ಯವನ್ನು ನಿರ್ವಹಿಸುತ್ತಾರೆ. ಅವರು ಭೂಮಿಯ ಗಡಿಗಳನ್ನು ನಿರ್ಧರಿಸುವುದು, ಭೂಮಿಯ ಮೇಲಿನ ಕಟ್ಟಡಗಳು ಮತ್ತು ಇತರ ರಚನೆಗಳನ್ನು ನಕ್ಷೆ ಮಾಡುವುದು, ಭೂಮಿಯ ಮೇಲಿನ ಯೋಜನೆಗಳನ್ನು ರೂಪಿಸುವುದು ಮುಂತಾದ ಕೆಲಸಗಳನ್ನು ಮಾಡುತ್ತಾರೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಉತ್ತಮ ಗಣಿತ(Mathematics) ಮತ್ತು ಭೌತಶಾಸ್ತ್ರ(Physics) ಜ್ಞಾನಹೊಂದಿರಬೇಕು. ಅಭ್ಯರ್ಥಿಗಳು ಭಾರತೀಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಭೂಮಿ ಸರ್ವೆಕ್ಷಣೆ ಮತ್ತು ನಕ್ಷೆ ತಯಾರಿಕೆ ಡಿಪ್ಲೋಮಾ (Diploma in Land Surveying and Map Making), BE /B- tech ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ITI ಪ್ರಮಾಣಪತ್ರ ಪಡೆದಿರಬೇಕು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಸುದ್ದಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

whatss

 ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!