ಯೂನಿಯನ್ ಬ್ಯಾಂಕ್​​ನಲ್ಲಿ  ಅಪ್ರೆಂಟಿಸ್​​ಗಳ ನೇಮಕಾತಿ ; ಡಿಗ್ರಿ ಆದವರು ಅಪ್ಲೈ ಮಾಡಿ

IMG 20240831 WA0002

ಈ ವರದಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 (Union Bank of India Recruitment) 2024 ರ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 (Union Bank of India Recruitment) ಅವಲೋಕನ:

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ಈ ಬಾರಿ 500 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) 2024 ಮೂಲಕ ಅಪ್ರೆಂಟಿಸ್ ಪೋಸ್ಟ್‌ಗಳನ್ನು  ನೇಮಕಾತಿಗಾಗಿ ಆನ್‌ಲೈನ್ ನೋಂದಣಿ (Online registration) 28 ಆಗಸ್ಟ್  2024 ರಂದು ಪ್ರಾರಂಭವಾಗುತ್ತದೆ ಮತ್ತು 17 ಸೆಪ್ಟೆಂಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು  – ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank of India)
ಹುದ್ದೆಗಳ ಹೆಸರು – ಅಪ್ರೆಂಟಿಸ್ ಪೋಸ್ಟ್‌
ಒಟ್ಟು ಹುದ್ದೆಗಳು 500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಭಾರತ

ವಿದ್ಯಾರ್ಹತೆ :

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಯೋಜನೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 17, 2024 ರೊಳಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಶಿಷ್ಯವೃತ್ತಿಯ ಸಮಯದಲ್ಲಿ (apprenticeship) ಒದಗಿಸಿದ ಉದ್ಯೋಗದ ತರಬೇತಿಯಿಂದ ಪ್ರಯೋಜನ ಪಡೆಯಲು ಅಭ್ಯರ್ಥಿಗಳು ಅಗತ್ಯವಾದ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ಇದು ಖಚಿತಪಡಿಸುತ್ತದೆ.

ವಯೋಮಿತಿ :

ಈ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ವಯಸ್ಸಿನ ಮಾನದಂಡವು ಆಗಸ್ಟ್ 1, 2024 ರಂತೆ ಅಭ್ಯರ್ಥಿಗಳು 20 ರಿಂದ 28 ವರ್ಷ ವಯಸ್ಸಿನವರಾಗಿರಬೇಕು. ಇದರರ್ಥ ಆಗಸ್ಟ್ 2, 1996 ಮತ್ತು ಆಗಸ್ಟ್ 1, 2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ, ಇದರಲ್ಲಿ ಇವು ಸೇರಿವೆ:

SC/ST ಅಭ್ಯರ್ಥಿಗಳು: 5 ವರ್ಷಗಳು
OBC (ನಾನ್-ಕ್ರೀಮಿ ಲೇಯರ್) ಅಭ್ಯರ್ಥಿಗಳು: 3 ವರ್ಷಗಳು
ವಿಕಲಾಂಗ ವ್ಯಕ್ತಿಗಳು (PwBD): 10 ವರ್ಷಗಳು

ಸಂಬಳದ ಪ್ಯಾಕೆಜ್ ಎಷ್ಟು?

ಆಯ್ಕೆ ಆದ ಅಭ್ಯರ್ಥಿಗಳಿಗೆ ತರಬೇತಿ ಅವಧಿ 1 ವರ್ಷ / ತಿಂಗಳಿಗೆ ₹15,000 ಸ್ಟೈಪೆಂಡ್ ನೀಡಲಾಗುತ್ತದೆ.

ಅರ್ಜಿ ಶುಲ್ಕ  :

ಸಾಮಾನ್ಯ/OBC : ₹800 + GST
ಎಲ್ಲಾ ಮಹಿಳಾ ಅಭ್ಯರ್ಥಿಗಳು : ₹600 + GST
SC/ST : ₹600 + GST
PwBD : ₹400 + GST

ಆಯ್ಕೆ ಪ್ರಕ್ರಿಯೆ :

ಆನ್‌ಲೈನ್ ಪರೀಕ್ಷೆ(Online Exam) : ಆನ್‌ಲೈನ್ ಪರೀಕ್ಷೆಯು ನಾಲ್ಕು ವಿಭಾಗಗಳನ್ನು ಒಳಗೊಂಡಿರುತ್ತದೆ: ಸಾಮಾನ್ಯ/ಹಣಕಾಸು ಅರಿವು, ಸಾಮಾನ್ಯ ಇಂಗ್ಲಿಷ್, ಕ್ವಾಂಟಿಟೇಟಿವ್ ಮತ್ತು ರೀಸನಿಂಗ್ ಆಪ್ಟಿಟ್ಯೂಡ್, ಮತ್ತು ಕಂಪ್ಯೂಟರ್ ಜ್ಞಾನ. ಒಟ್ಟು ಪ್ರಶ್ನೆಗಳ ಸಂಖ್ಯೆ 100 ಆಗಿರುತ್ತದೆ, ಪ್ರತಿಯೊಂದೂ ಒಂದು ಅಂಕವನ್ನು ಹೊಂದಿರುತ್ತದೆ ಮತ್ತು ಪರೀಕ್ಷೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳಿಗೆ 60 ನಿಮಿಷಗಳು ಇರುತ್ತವೆ.

ಸ್ಥಳೀಯ ಭಾಷೆಯ ಜ್ಞಾನ ಮತ್ತು ಪರೀಕ್ಷೆ : ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು ಮತ್ತು ದಾಖಲೆ ಪರಿಶೀಲನೆಯ ಸಮಯದಲ್ಲಿ ಅಥವಾ ಭಾಷಾ ಪರೀಕ್ಷೆಯ ಮೂಲಕ ಅವರು ಈ ಪ್ರಾವೀಣ್ಯತೆಯ ಪುರಾವೆಗಳನ್ನು ಒದಗಿಸಬೇಕಾಗಬಹುದು.

ವೈದ್ಯಕೀಯ ಪರೀಕ್ಷೆ (Medical test): ಆಯ್ಕೆಯಾದ ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್‌ಗೆ ಅರ್ಹರಾಗಿರುವುದನ್ನು ಖಚಿತಪಡಿಸಿಕೊಳ್ಳಲು ನೋಂದಾಯಿತ ಸಾಮಾನ್ಯ ವೈದ್ಯರು ನಡೆಸುವ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
www.unionbankofindia.co.in

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28.08.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17.09.2024

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!