Vande Bharat: ರಾಜ್ಯದ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಮೀಕ್ಷೆ!

Vande Bharat

ಕರ್ನಾಟಕದ (karnataka) ಹೊಸ ಮಾರ್ಗದಲ್ಲಿ ಒಂದೇ ಭಾರತ್ ರೈಲು ಸಂಚಾರ ಆರಂಭವಾಗಲಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vandhe Bharath express train) ಸಂಚಾರ ಈಗಾಗಲೇ ಉತ್ತಮ ಸೇವೆಗಳನ್ನು ನೀಡುತ್ತಿದೆ. ಈ ರೈಲುಗಳು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (super fast express) ಸೇವೆಯನ್ನು ನೀಡುತ್ತವೆ. ಇದನ್ನು ನಿರ್ವಹಿಸುವುದು ಭಾರತೀಯ ರೈಲ್ವೇಗಳು(Indian railways). ಇದು ಕಾಯ್ದಿರಿಸಿದ, ಹವಾನಿಯಂತ್ರಿತ ಚೇರ್ ಕಾರ್ ಸೇವೆಯಾಗಿದ್ದು, 800 km (500 mi) ಗಿಂತ ಕಡಿಮೆ ಅಂತರದಲ್ಲಿರುವ ಅಥವಾ ಅಸ್ತಿತ್ವದಲ್ಲಿರುವ ಸೇವೆಗಳೊಂದಿಗೆ ಪ್ರಯಾಣಿಸಲು ಹತ್ತು ಗಂಟೆಗಳಿಗಿಂತ ಕಡಿಮೆ ಸಮಯ ತೆಗೆದುಕೊಂಡು ನಗರಗಳನ್ನು ಸಂಪರ್ಕಿಸುತ್ತವೆ. ಹಾಗೆಯೇ ಇದೀಗ ಕರ್ನಾಟಕದ ಹೊಸ ಮಾರ್ಗಗಳಲ್ಲಿ ಒಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗಳನ್ನು ಆರಂಭ ಮಾಡಲು ನಿರ್ಧಸಿದೆ. ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು  ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬೇಡಿಕೆ ಇಟ್ಟರೂ ಕರ್ನಾಟಕದಲ್ಲಿ ಇನ್ನೂ ಆರಂಭವಾಗದ ರೈಲು ಸಂಚಾರ :

ಈಗಾಗಲೇ ಕರ್ನಾಟಕದಲ್ಲಿ 10 ಕ್ಕೂ ಹೆಚ್ಚು ಮಾರ್ಗದಲ್ಲಿ ರೈಲು ಸಂಚಾರ ಮಾಡಬೇಕು ಎಂದು ಬೇಡಿಕೆ ಇದೆ. ಈಗಾಗಲೇ ಕರ್ನಾಟಕದಲ್ಲಿ 5ಕ್ಕೂ ಹೆಚ್ಚು ರೈಲು ಸಂಚಾರವಿದೆ. ಜನ ದಟ್ಟಣೆ ಕಾರಣದಿಂದಾಗಿ ರೈಲು ಸಂಚಾರ ಅಥವಾ ಇನ್ನೂ ಹೆಚ್ಚು ರೈಲುಗಳನ್ನು ಆರಂಭಿಸುವ ಬೇಡಿಕೆ ಇದಾಗಿದೆ. ಆದರೆ ಕರ್ನಾಟಕದ  ಯಾವುದೇ ಹೊಸ ರೈಲು ಮಾರ್ಗ ಘೋಷಣೆಯಾಗಿಲ್ಲ.
ಕೆಎಸ್ಆರ್ ಬೆಂಗಳೂರು-ಧಾರವಾಡ ಅಷ್ಟೇ ಅಲ್ಲದೆ ಹುಬ್ಬಳ್ಳಿ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಇದೆ. ಪ್ರಾಯೋಗಿಕ ಸಂಚಾರವೂ ಮುಗಿದಿದೆ. ಸದ್ಯ ರೈಲು ಸಂಚಾರ ಆರಂಭವಾಗಿಲ್ಲ. ಹಾಗಾಗಿ ಆದಷ್ಟು ಬೇಗ ರೈಲು ಸಂಚಾರವಾಗಬೇಕು ಎಂದು ಸರ್ಕಾರಕ್ಕೆ ಬೇಡಿಕೆ ನೀಡಲಾಗಿದೆ.

ಸದ್ಯ ಕರ್ನಾಟಕದಲ್ಲಿ ವಂದೇ ಭಾರತ್ ರೈಲು ಸಂಚಾರ ಇರುವ ಸ್ಥಳಗಳು  :

ಇದೀಗ ಸದ್ಯಕ್ಕೆ ಕರ್ನಾಟಕದಲ್ಲಿ ವಂದೇ ಭಾರತ್ ರೈಲುಗಳು ಮೈಸೂರು-ಚೆನ್ನೈ, ಬೆಂಗಳೂರು-ಧಾರವಾಡ, ಬೆಂಗಳೂರು-ಹೈದರಾಬಾದ್, ಮಂಗಳೂರು-ಮಡಗಾಂವ್,ಬೆಂಗಳೂರು-ಕೊಯಮತ್ತೂರು, ಬೆಂಗಳೂರು-ಕಲಬುರಗಿ ನಡುವೆ ಸಂಚಾರ ನಡೆಸುತ್ತಿವೆ.

ರೈಲು ತಯಾರಾಗಿದ್ದು, ಇನ್ನೂ ಸಂಚಾರದ ಸ್ಥಳಗಳ ನಿಗದಿಯಾಗಿಲ್ಲ :

ಸದ್ಯ ಕರ್ನಾಟಕದಲ್ಲಿ ಸಂಚಾರ ನಡೆಸುತ್ತಿರುವ ವಂದೇ ಭಾರತ್ ರೈಲುಗಳಲ್ಲಿ ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಒಪ್ಪಿಗೆಯನ್ನು ನೀಡಿದೆ. ಈಗಾಗಲೇ ಚೆನ್ನೈ ಇಂಟಿಗ್ರಲ್ ಕೋಚ್‌ ಫ್ಯಾಕ್ಟರಿಯಲ್ಲಿ 8 ಬೋಗಿಗಳ ಹಲವು ವಂದೇ ಭಾರತ್ ರೈಲುಗಳನ್ನು ತಯಾರು ಮಾಡಲಾಗಿದೆ. ಇವುಗಳಲ್ಲಿ 8 ರೈಲುಗಳನ್ನು ನೈಋತ್ಯ ರೈಲ್ವೆಗೆ ಹಂಚಿಕೆ ಮಾಡಲಾಗಿದೆ. ಈ ರೈಲುಗಳನ್ನು ಯಾವ ಮಾರ್ಗದಲ್ಲಿ ಸಂಚಾರ ನಡೆಸಲಾಗುತ್ತದೆ? ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಹೊಸ ಮಾರ್ಗದಲ್ಲಿ ರೈಲು ಓಡಿಸಲು ಇನ್ನೂ ಒಪ್ಪಿಗೆ ಸಿಕ್ಕಿಲ್ಲ :

ಇನ್ನು ನೋಡುವುದಾದರೆ, 2023ರ ನವೆಂಬರ್‌ನಲ್ಲಿ ಬೆಂಗಳೂರು-ಬೆಳಗಾವಿ ನಡುವೆ ಪ್ರಾಯೋಗಿಕ ರೈಲು ಸಂಚಾರ ಮುಕ್ತಾಯಗೊಂಡಿದೆ. ವಂದೇ ಭಾರತ್ ರೈಲು ನಿರ್ವಹಣೆಗೆ ಬೇಕಾದ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳು ಇಲ್ಲದ ಕಾರಣ ವಂದೇ ಭಾರತ್ ರೈಲುಗಳ ಸಂಚಾರ ಇನ್ನೂ ಸಹ ಆರಂಭವಾಗಿಲ್ಲ. ಕರ್ನಾಟಕದಲ್ಲಿ ಯಾವ-ಯಾವ ಮಾರ್ಗದಲ್ಲಿ ಹೊಸ ವಂದೇ ಭಾರತ್ ರೈಲುಗಳು ಓಡಲಿವೆ ಎಂಬ ಬಗ್ಗೆ ಇನ್ನೂ ಅಧಿಕಾರಿಗಳು ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಆದರೆ ನೈಋತ್ಯ ರೈಲ್ವೆ 19/7/2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಬೆಂಗಳೂರು-ಬೆಳಗಾವಿ, ಬೆಂಗಳೂರು-ಹೊಸಪೇಟೆ, ಬೆಂಗಳೂರು-ತಿರುಪತಿ, ಬೆಂಗಳೂರು-ಮುಧುರೈ, ಬೆಂಗಳೂರು-ಪುದುಚೇರಿ, ಬೆಂಗಳೂರು-ಶಿವಮೊಗ್ಗ ಮತ್ತು ಬೀದರ್-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ನೈಋತ್ಯ ರೈಲ್ವೆ ಯಾವ-ಯಾವ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲುಗಳನ್ನು ಓಡಿಸಬಹುದು ಎಂದು ಸಮೀಕ್ಷೆಯೊಂದನ್ನು ಮಾಡಿ ರೈಲ್ವೆ ಇಲಾಖೆಗೆ ಕಳಿಸಿದೆ. ಆದರೆ ಯಾವುದೇ ಹೊಸ ಮಾರ್ಗದಲ್ಲಿ ರೈಲು ಓಡಿಸಲು ಇನ್ನೂ ಒಪ್ಪಿಗೆ ಸಿಕ್ಕಿಲ್ಲ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!