ಪಶುಇಲಾಖೆ ನೇಮಕಾತಿ(Veterinary Department Recruitment)ಗೆ ಅಧಿಸೂಚನೆ ಹೊರಡಿಸಿದ ಕರ್ನಾಟಕ ಸರ್ಕಾರ!
ಕರ್ನಾಟಕದ ಪಶು ಇಲಾಖೆಯಲ್ಲಿಯೂ ಕೂಡ ಹಲವಾರು ಹುದ್ದೆಗಳು ಖಾಲಿ ಇವೆ. ಕರ್ನಾಟಕ ಪಶು ಇಲಾಖೆ ನೇಮಕಾತಿ 2024 ಕ್ಕಾಗಿ ಕಾಯುತ್ತಿರುವ ನಿರುದ್ಯೋಗಿ ಯುವಕರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಏಕೆಂದರೆ ಕರ್ನಾಟಕ ಪಶು ಇಲಾಖೆಯಲ್ಲಿ (Animal Husbandry Department) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಹಾಗಾಗಿ ಇದೀಗ 2024 ರಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ (Animal Husbandry and Veterinary Services department) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಶು ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದು ಕೊಂಡು ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ಖಾಲಿ ಇರುವ ಇಲಾಖೆಯ ಹೆಸರು : ಪಶುಪಾಲನೆ ಮತ್ತು ಪಶುವೈದ್ಯ ಸೇವಾ 3 – AHVS Karnataka
ಹುದ್ದೆಗಳ ಹೆಸರು: ಪಶುವೈದ್ಯಾಧಿಕಾರಿಗಳು
ಒಟ್ಟು ಹುದ್ದೆಗಳು : 400
ಅರ್ಜಿ ಸಲ್ಲಿಸುವ ವಿಧ : ಆನ್ಲೈನ್
ಹುದ್ದೆಗೆ ಇರಬೇಕಾದ ವಿದ್ಯಾರ್ಹತೆ (qualifications) :
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಾದ ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ ಅಂಡ್ ಎಹೆಚ್ ಪದವಿಯನ್ನು ಪಡೆದಿರಬೇಕು.
ವಯೋಮಿತಿ (age limit) :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ (salary) :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,640 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ ( selection step) :
ಅಭ್ಯರ್ಥಿಗಳು ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.
ಅರ್ಜಿ ಸಲ್ಲಿಕೆಗೆ ಇರುವ ಪ್ರಮುಖ ದಿನಾಂಕಗಳು (important dates) :
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 14 ಜೂನ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 24 ಜೂನ್ 2024
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಬಹುದು :
ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್, ಬಿಜಾಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಹುಬ್ಬಳ್ಳಿ, ಕಲಬುರಗಿ, ಕಾರವಾರ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮಂಗಳೂರು, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ.
ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ್: https://ahvs.karnataka.gov.in/english
ಅಧಿಕೃತ ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.