ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ಮತ್ತೇ ಅವಕಾಶ

IMG 20240819 WA0002

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಇನ್ನಾವುದೇ ಬದಲಾವಣೆಗಳಿಗೆ ಅವಕಾಶ.

ಮತದಾರರ ಫೋಟೊ ಗುರುತಿನ ಚೀಟಿ (EPIC) ಎಂದೂ ಕರೆಯಲ್ಪಡುವ   ಮತದಾರರ ಗುರುತಿನ ಚೀಟಿ (Voters Identity Card) ಯನ್ನು ಭಾರತದ ಚುನಾವಣಾ ಆಯೋಗವು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲಾ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಮತದಾರರ ಪಟ್ಟಿಯ ನಿಖರತೆಯನ್ನು ಸುಧಾರಿಸುವುದು ಮತ್ತು ಚುನಾವಣಾ ವಂಚನೆಯ ಪ್ರಕರಣಗಳನ್ನು ತಡೆಯಲು ಸಹಾಯ ಮಾಡುವುದು ಈ ಕಾರ್ಡ್‌ನ ಪ್ರಾಥಮಿಕ ಉದ್ದೇಶವಾಗಿದೆ. ಹೆಚ್ಚುವರಿಯಾಗಿ, ವ್ಯಕ್ತಿಗಳು ತಮ್ಮ ಮತವನ್ನು ಚಲಾಯಿಸಿದಾಗ ಇದು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಈ ಕಾರ್ಡ್ ಅನ್ನು ಸಾಮಾನ್ಯವಾಗಿ ಚುನಾವಣಾ ಕಾರ್ಡ್, ಮತದಾರರ ಕಾರ್ಡ್ ಎಂದು ಇತರ ಹೆಸರುಗಳಿಂದ ಕರೆಯಲಾಗುತ್ತದೆ. ಇದೀಗ ಮತದಾರರ ಕಾರ್ಡ್ ಗೆ ಹೊಸ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅರ್ಜಿಗಳನ್ನು ಎಂದಿನಿಂದ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ? ಅರ್ಜಿ ಹೇಗೆ ಸಲ್ಲಿಸಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗೆ (voter ID update) ಅವಕಾಶ :

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಸಿಹಿಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಅಗಸ್ಟ್ 20 (Agust 20) ರಿಂದ ಅಕ್ಟೋಬರ್ 18ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಅಥವಾ ಇನ್ನಾವುದೇ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ, ಮತದಾರರ ಎಲ್ಲ ರೀತಿಯ ತಿದ್ದುಪಡಿಯ ಕುರಿತು ಅರ್ಜಿ ಸಲ್ಲಿಸಬಹುದು :

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ತಿದ್ದುಪಡಿ, ಹೆಸರು ನೋಂದಣಿ, ಮೃತರು ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ, 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿ ಸಲ್ಲಿಸಬಹುದಾಗಿದೆ.

ಮತದಾರರ ಪಟ್ಟಿ ತಯಾರಿಕೆಗೆ ದಿನಾಂಕಗಳ (Dates) ನಿಗದಿ  :

ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಅಕ್ಟೋಬರ್ 19 ರಿಂದ 28 ರ ವರೆಗೆ ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು.
ಅಕ್ಟೋಬರ್ 29 ರಂದು ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ.
2025ರ ಜನವರಿ 1ರೊಳಗೆ ಮತದಾರರ ಪಟ್ಟಿ ಗುಣಮಟ್ಟ ಪರಿಶೀಲಿಸಲಾಗುವುದು.
ಜನವರಿ 6ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಆಕ್ಷೇಪಣೆ ಅವಧಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳು ನಿಗದಿತ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಅವಕಾಶ :

ವೋಟರ್ ಹೆಲ್ಪ್ ಲೈನ್‌ ಅಲ್ಪಿಕೇಶನ್(Voter Helpline Application) ಮೂಲಕ ಸುಲಭವಾಗಿ ಸೇರ್ಪಡೆ / ತೆಗೆದುಹಾಕುವಿಕೆ/ತಿದ್ದುಪಡಿಗೆ ಅವಕಾಶವಿದೆ.
ಅಷ್ಟೇ ಅಲ್ಲದೆ https://voters.eci.gov.in ವೆಬ್ ಸೈಟ್ (Website) ಗೆ ಲಾಗಿನ್ ಆಗಿ ಆನ್ ಲೈನ್ ಮೂಲಕ ಸಲ್ಲಿಸಬಹುದು, ಇಲ್ಲದಿದ್ದರೆ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ ಅವರೊಂದಿಗೆ ಸಂಪರ್ಕಿಸಬಹುದು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!