ಸೆಪ್ಟೆಂಬರ್ 7ರವರೆಗೆ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 7ರವರೆಗೂ ಮುಂದುವರೆಯಲಿದೆ. ಹೌದು ಮಳೆಯಿಂದ ಹಲವರಿಗೆ ಸಂತೋಷ ಉಂಟಾದರೆ, ಇನ್ನು ಕೆಲವರಿಗೆ ಕಷ್ಟಗಳೇ ಹೆಚ್ಚಾಗುತ್ತವೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ ಎಲ್ಲರಿಗೂ ಕೂಡ ಈ ಮುನ್ಸೂಚನೆಯಿಂದ ಉಪಕಾರವಾಗುತ್ತದೆ. ಇದೀಗ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ. ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇಲ್ಲಿದೆ ಸಂಪೂರ್ಣ ಮಾಹಿತಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಆಗಾಗ ಮಳೆಯಾಗಲಿದೆ. ಈಗಾಗಲೇ ಸೇಡಂ, ಕಲಬುರಗಿ, ಚಿತ್ತಾಪುರ, ಪಣಂಬೂರು, ಕಮಲಾಪುರ, ಚಿಂಚೋಳಿ, ಜೇವರ್ಗಿ, ಬೀದರ್, ಗೇರುಸೊಪ್ಪ, ಔರಾದ್, ಆಗುಂಬೆ, ಲಿಂಗನಮಕ್ಕಿ, ಶಿರಾಲಿ, ಬೀದರ್, ಸೈದಾಪುರ, ಚಿಟಗುಪ್ಪ, ಸುಳ್ಯ, ಸಿದ್ದಾಪುರ, ಮಂಠಾಳದಲ್ಲಿ ಮಳೆಯಾಗಿದ್ದು ಮುಂದಿನ ನಾಲ್ಕೂ ದಿನಗಳು ಹೀಗೆ ಮುಂದುವರೆಯಲಿದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.
ಸೆಪ್ಟೆಂಬರ್ 7ರವರೆಗೆ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಜನರು ಹಾಗೂ ಮೀನುಗಾರರು ಹೆಚ್ಚರದಿಂದ ಇರಬೇಕು ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಉಡುಪಿ, ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಉತ್ತರ ಕನ್ನಡ, ಬೀದರ್, ವಿಜಯಪುರ, ಯಾದಗಿರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ.
ಭಾರಿ ಹೆಚ್ಚು ಮಳೆ ಬೀಳುವ ಪ್ರದೇಶಗಳು :
ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಡಿಮೆ ಮಳೆ ಬೀಳುವ ಪ್ರದೇಶಗಳು :
ರಾಜಧಾನಿ ಬೆಂಗಳೂರಿನಲ್ಲಿ (Bangalore) ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ.ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮೀನುಗಾರರಿಗೆ ಕಟ್ಟೆಚ್ಚರ :
ಸೆಪ್ಟೆಂಬರ್ 7ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರತೀರದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಎಷ್ಟು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ :
ಎಚ್ಎಎಲ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 19.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ