Yuvanidhi Application – ಯುವನಿಧಿ ಹಣ ಪಡೆಯಲು ಅರ್ಜಿ ಸಲ್ಲಿಸಲು ಅಧಿಕೃತ ದಿನಾಂಕ ಪ್ರಕಟ. ಈ ದಾಖಲೆಗಳು ಕಡ್ಡಾಯ

Yuvanidhi update

ಕರ್ನಾಟಕ ರಾಜ್ಯ ಸರ್ಕಾರ(State government)ದಿಂದ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದಾಗಿದೆ ಅದೇನೆಂದರೆ, ಐದನೇ ಗ್ಯಾರೆಂಟಿ ಯೋಜನೆಯಾದ ಯುವನಿಧಿಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ. ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್(Seva sindhu portal) ಮೂಲಕ ನೋಂದಣಿಯನ್ನು ಮಾಡಿಕೊಳ್ಳಬಹುದು. ಜನವರಿ 1 2024 ನೇ ತಾರೀಕಿನಿಂದ ಯೋಜನೆ ಪ್ರಾರಂಭಗೊಳ್ಳಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯುವನಿಧಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ದಿನಾಂಕ ಪ್ರಕಟ :

IMG 20231216 WA0010

ಗ್ಯಾರೆಂಟಿ ಯೋಜನೆಗಳೆಲ್ಲವೂ (Guarantee Schemes) ಜಾರಿಗೆ ಬಂದಂತಾಯಿತು. ಗೃಹ ಜ್ಯೋತಿ(Gruhajyoti), ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ(Gruhalakshmi), ಯುವ ನಿಧಿ ಎಂಬ ಐದು ಯೋಜನೆಗಳ ಫಲವನ್ನು ಈಗ ಕರ್ನಾಟಕದ ಜನತೆ ಪಡೆಯಬಹುದಾಗಿದೆ. ಕೊನೆಯ ಗ್ಯಾರೆಂಟಿಗಳಲ್ಲಿ ಒಂದಾದ ಯುವ ನಿಧಿಗೆ (Karnataka Yuva Nidhi) ಮುಹೂರ್ತ ಫಿಕ್ಸ್ ಮಾಡಿದೆ.

ಕರ್ನಾಟಕ ಸರ್ಕಾರವು ನಿರುದ್ಯೋಗಿ ಯುವಕರಿಗೆ ಅನುಕೂಲವಾಗುವಂತೆ ಕರ್ನಾಟಕದಲ್ಲಿ ಯುವ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ರಾಜ್ಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ. ಅರ್ಹ ಫಲಾನುಭವಿಗಳು ನೇರ ಬ್ಯಾಂಕ್ ವರ್ಗಾವಣೆ (DBT) ಮೂಲಕ ನೇರವಾಗಿ ತಮ್ಮ ಬ್ಯಾಂಕ್ ಖಾತೆಗಳಲ್ಲಿ ಮಾಸಿಕ ಸಹಾಯವನ್ನು ಪಡೆಯುತ್ತಾರೆ. ಅವರು ಉದ್ಯೋಗವನ್ನು ಕಂಡುಕೊಳ್ಳುವವರೆಗೆ ಅಥವಾ ಎರಡು ವರ್ಷಗಳವರೆಗೆ ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತಾರೆ.

ಯುವ ನಿಧಿ ಯೋಜನೆ ಬಿಗ್ ಅಪ್ಡೇಟ್

ಯುವ ನಿಧಿ ಯೋಜನೆಯನ್ನು ಡಿಸೆಂಬರ್ ನಲ್ಲಿ ಜಾರಿಗೆ ತರುದಾಗಿ ಸಚಿವ ಶರಣಪ್ರಕಾಶ್ ಆರ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶರಣಪ್ರಕಾಶ್ ಆರ್ ಪಾಟೀಲ್ (sharana Prakash R Patil) ಯುವ ನಿಧಿ ಯೋಜನೆಯನ್ನು ಡಿಸೆಂಬರ್ 26 ರಿಂದ ಜಾರಿಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಯೋಜನೆಗೆ ಸುಮಾರು 250 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

whatss

 

ಯುವ ನಿಧಿ ಯೋಜನೆ ಅರ್ಹತೆಗಳು :

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರುವವರಾಗಿರಬೇಕು, ಅರ್ಜಿದಾರರು 2022-2023 ರಲ್ಲಿ ಅವನ / ಅವಳ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು, ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 6 ತಿಂಗಳುಗಳ ಕಾಲ ನಿರುದ್ಯೋಗಿಯಾಗಿರಬೇಕು.

ಯಾರಿಗೆ ಎಷ್ಟು ಹಣ?

– ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ

– ಡಿಪ್ಲೊಮಾ ಪಾಸ್ ಆದವರಿಗೆ ತಿಂಗಳಿಗೆ ರೂ.1,500

ಅರ್ಜಿದಾರರು ಉತ್ತೀರ್ಣರಾದ ಮತ್ತು ನಿರುದ್ಯೋಗಿಗಳಾದ ಆರು ತಿಂಗಳ ನಂತರ ಸರ್ಕಾರ ಈ ಮೊತ್ತವನ್ನು ನೀಡುತ್ತದೆ . ಆದರೆ, ಎರಡು ವರ್ಷಗಳ ನಂತರ ಅಥವಾ ಎರಡು ವರ್ಷಗಳಲ್ಲಿ ಯುವಕರಿಗೆ ಉದ್ಯೋಗ ದೊರೆತ ತಕ್ಷಣ ಮೊತ್ತವನ್ನು ನೀಡುವುದಿಲ್ಲ .

ಯೋಜನೆಗೆ ಬೇಕಾದ ದಾಖಲೆಗಳು :

ಕರ್ನಾಟಕದ ನಿವಾಸಿ ಎಂಬ ಪುರಾವೆ,

ಆಧಾರ್ ಕಾರ್ಡ್ ,

ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ,

ಡಿಪ್ಲೊಮಾ ಪ್ರಮಾಣಪತ್ರ. (ಡಿಪ್ಲೊಮಾ ಹೊಂದಿರುವವರಿಗೆ),

ಜಾತಿ ಪ್ರಮಾಣ ಪತ್ರ,

ಆದಾಯ ಪ್ರಮಾಣಪತ್ರ,

ಮೊಬೈಲ್ ನಂಬರ್,

ಬ್ಯಾಂಕ್ ಖಾತೆ ವಿವರಗಳು,

ಸೆಲ್ಫ್ ಡಿಕ್ಲೆರೇಷನ್ ಪ್ರತಿ

tel share transformed

ಯುವನಿಧಿ ಯೋಜನೆಗೆ ಸೇವಾ ಸಿಂಧುವಿನಲ್ಲಿ ಅರ್ಜಿಯನ್ನು ಸಲ್ಲಿಸುವ ವಿಧಾನ :

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿಅರ್ಜಿ ಸಲ್ಲಿಸಬೇಕು. ಹಲವು ಸರ್ಕಾರಿ ಯೋಜನೆಗಳ ಸವಲತ್ತು ಪಡೆಯುವ ತಾಣ ಇದು. ಇದರಲ್ಲಿ ಈಗ ಯುವ ನಿಧಿ ಕೂಡಾ ಸೇರ್ಪಡೆಯಾಗಿದೆ. ಅರ್ಜಿ ಸಲ್ಲಿಕೆ ಪ್ರಾರಂಭವಾಗಿರದ ಕಾರಣ ಯುವ ನಿಧಿ ಯೋಜನೆಯ ಪೇಜ್ ಓಪನ್ ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://sevasindhugs.karnataka.gov.in/#

ಇನ್ನೇನು ಕೆಲವೇ ದಿನಗಳಲ್ಲಿ ಈ ಯೋಜನೆ ಸೇವಾ ಸಿಂಧುವಿನಲ್ಲಿ ಸೇರಿಸಲಾಗುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!